ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದು ಯಾಕೆ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪ್ರಣಾಳಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಪ್ರಧಾನಿ ಭೇಟಿಗೆ ಸಮಯ ಕೋರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪ್ರಣಾಳಿಕೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಪ್ರಧಾನಿ ಭೇಟಿಗೆ ಸಮಯ ಕೋರಿದ್ದಾರೆ.

ಬಿಜೆಪಿ ಚುನಾವಣಾ ಲಾಭಕ್ಕಾಗಿ ಕೋಮು ಧ್ರುವೀಕರಣ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಮೋದಿ ಅವರು ಪ್ರಧಾನಿ ಹುದ್ದೆಗೆ ತಕ್ಕ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯವನ್ನು ಪ್ರಧಾನಿ ಉಲ್ಲೇಖಿಸುತ್ತಿದ್ದಾರೆ ಮತ್ತು ಚುನಾವಣಾ ಲಾಭಕ್ಕಾಗಿ ದೇಶದಲ್ಲಿ ಕೋಮು ಧ್ರುವೀಕರಣವನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ
ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ್ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ "ಅರಿವು" ಮೂಡಿಸಲು ಪ್ರಧಾನಿ ಮೋದಿ ಭೇಟಿಗೆ ಅಪಾಯಿಂಟ್‌ಮೆಂಟ್ ಕೇಳಿದ್ದಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಪ್ರಧಾನಿ ಮೋದಿ ಆರೋಪಿಸಿದ್ದರು. ಅಲ್ಲದೆ ಅಲ್ಪಸಂಖ್ಯಾತ ಸಮುದಾಯಕ್ಕೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದರು.

ನಿನ್ನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು "ಒಳನುಸುಳುಕೋರರು" ಮತ್ತು "ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ" ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com