ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ: ಮೋದಿ ಹೇಳಿಕೆ ವಿರೋಧಿಸಿ EC ಗೆ 17 ಸಾವಿರಕ್ಕೂ ಹೆಚ್ಚು ಭಾರತೀಯರು ಪತ್ರ!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ವಿರುದ್ಧ 17,400ಕ್ಕೂ ಹೆಚ್ಚು ಭಾರತೀಯರು ಸೋಮವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ವಿರುದ್ಧ 17,400ಕ್ಕೂ ಹೆಚ್ಚು ಭಾರತೀಯರು ಸೋಮವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಸ್ಕ್ರಾಲ್ ವರದಿ ಮಾಡಿದೆ.

"ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರುವ ಪ್ರಧಾನಿ ಮೋದಿ ಏಪ್ರಿಲ್ 21 ರಂದು ರಾಜಸ್ಥಾನದಲ್ಲಿ ಮಾಡಿದ ಭಾಷಣವು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ತಂದಿದೆ. ಮೋದಿ ಭಾಷಣ ಅತ್ಯಂತ ಅಪಾಯಕಾರಿ ಮತ್ತು ಭಾರತದ ಮುಸ್ಲಿಮರ ಮೇಲೆ ನೇರ ದಾಳಿಯಾಗಿದೆ". ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು 17 ಸಾವಿಕ್ಕೂ ಹೆಚ್ಚು ಭಾರತೀಯರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ಮತ ಕೇಳುವ ಉದ್ದೇಶದಿಂದ ಮೋದಿಯವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷೆ ಬಳಸುತ್ತಿರುವುದು ಭಾರತ "ಪ್ರಜಾಪ್ರಭುತ್ವದ ತಾಯಿ' ಎಂಬ ಘನತೆಯನ್ನು ಹಾಳುಮಾಡುತ್ತದೆ ಎಂದು ನಾಗರಿಕರ ಗುಂಪು ಚುನಾವಣಾ ಆಯೋಗದ ಗಮನಸೆಳೆದಿದೆ.

ನರೇಂದ್ರ ಮೋದಿ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

"ಚುನಾವಣಾ ಆಯೋಗವು ಇಂತಹ ದ್ವೇಷ ಭಾಷಣದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅದರ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ" ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು "ಒಳನುಸುಳುಕೋರರು" ಮತ್ತು "ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ" ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com