ಧರ್ಮದ ಆಧಾರದ ಮೇಲೆ ಮೀಸಲಾತಿ ವಿಸ್ತರಿಸಲು ಕಾಂಗ್ರೆಸ್ ಬಯಸಿದೆ: ಪ್ರಧಾನಿ ನರೇಂದ್ರ ಮೋದಿ

ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲು ಮತ್ತು ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ನೀಡಿರುವ ಹಕ್ಕನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ರಾಜಸ್ಥಾನ: ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲು ಮತ್ತು ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ನೀಡಿರುವ ಹಕ್ಕನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.

ಟೋಂಕ್-ಸವಾಯಿ ಮಾಧೋಪುರ್ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ಮಾತನಾಡಿದ ಅವರು, 2004 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತಿದ್ದಂತೆಯೇ, ಆಂಧ್ರಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡುವ ಮೂಲಕ ಮುಸ್ಲಿಮರಿಗೆ ಮೀಸಲಾತಿ ನೀಡಿತು. ಆ ಪಕ್ಷಕ್ಕೆ ಸಂವಿಧಾನದ ಬಗ್ಗೆ ಕಾಳಜಿ ಎಂದು ಟೀಕಿಸಿದರು.

ದಲಿತರು ಮತ್ತು ಹಿಂದುಳಿದ ಬುಡಕಟ್ಟು ಜನಾಂಗದವರಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಅಥವಾ ಧರ್ಮದ ಹೆಸರಿನಲ್ಲಿ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಮುಕ್ತ ಹೃದಯದಿಂದ ಭರವಸೆ ನೀಡುತ್ತೇನೆ. ಸಂವಿಧಾನವನ್ನು ಅರ್ಥಮಾಡಿಕೊಂಡಿದ್ದು, ಸಂವಿಧಾನಕ್ಕೆ ಸಮರ್ಪಿತನಾಗಿದ್ದು, ತಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಆರಾಧಿಸುವ ವ್ಯಕ್ತಿ ಎಂದು ಪ್ರಧಾನಿ ಮೋದಿ ಹೇಳಿದರು.

ದೇಶದ ಸಂಪತ್ತು ಮುಸ್ಲಿಂರಿಗೆ ಹಂಚಿಕೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಂರಿಗೆ ಹಂಚಬಹುದು ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ ಪ್ರಧಾನಿ ಮೋದಿ ಮಂಗಳವಾರ ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದರು. ಇದರರ್ಥ ಅವರು ಈ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ನುಸುಳುಕೋರರಿಗೆ ಹಂಚುತ್ತಾರೆ ಎಂದು ಹೇಳಿದ್ದರು.

ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದೊಂದಿಗೆ ಆಟವಾಡಿದೆ. ಸಂವಿಧಾನ ರಚನೆಯಾದಾಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜಾತಿಗಳು ರಕ್ಷಣೆ ಪಡೆಯಲು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿರೋಧಿಸಲಾಯಿತು. ಆದರೆ ಮನಮೋಹನ್ ಸಿಂಗ್ ಅವರು ತಮ್ಮ ಭಾಷಣದಲ್ಲಿ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು. ಇದು ಪ್ರತ್ಯೇಕ ಹೇಳಿಕೆಯಾಗಿರಲಿಲ್ಲ. ಕಾಂಗ್ರೆಸ್‌ನ ಆಲೋಚನೆ ಯಾವಾಗಲೂ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯವಾಗಿದೆ ಎಂದು ಟೀಕಿಸಿದರು.

ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಕೂಡ ಅಪರಾಧವಾಗುತ್ತದೆ: ಪ್ರಧಾನಿ ನರೇಂದ್ರ ಮೋದಿ

2004ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಪ್ರಯತ್ನ ಅದರ ಮೊದಲ ಕೆಲಸವಾಗಿತ್ತು. ಇದು ಪ್ರಾಯೋಗಿಕ ಯೋಜನೆಯಾಗಿದ್ದು, ಇಡೀ ದೇಶದಲ್ಲಿ ಹೀಗೆ ಮಾಡಲು ಕಾಂಗ್ರೆಸ್ ಬಯಸಿದೆ. 2004 ಮತ್ತು 2010 ರ ನಡುವೆ, ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೆ ತರಲು ಕಾಂಗ್ರೆಸ್ ನಾಲ್ಕು ಬಾರಿ ಪ್ರಯತ್ನಿಸಿತು. ಆದರೆ, ಕಾನೂನು ತೊಡಕುಗಳು ಮತ್ತು ಸುಪ್ರೀಂ ಕೋರ್ಟ್‌ನ ಜಾಗ್ರತೆಯಿಂದಾಗಿ ಅವರು ತಮ್ಮ ಯೋಜನೆ ಯಶಸ್ವಿಯಾಗಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

2011ರಲ್ಲಿ ಕಾಂಗ್ರೆಸ್ ಇದನ್ನು ದೇಶಾದ್ಯಂತ ಜಾರಿಗೆ ತರಲು ಪ್ರಯತ್ನಿಸಿತು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಯವರಿಗೆ ನೀಡಿದ್ದ ಹಕ್ಕುಗಳನ್ನು ಕಿತ್ತುಕೊಂಡು ಮತಬ್ಯಾಂಕ್ ರಾಜಕಾರಣಕ್ಕಾಗಿ ಇತರರಿಗೆ ನೀಡಿದ್ದಾರೆ. ಇದೆಲ್ಲ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧ ಎಂದು ಗೊತ್ತಿದ್ದೇ ಕಾಂಗ್ರೆಸ್ ಈ ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ ಕಾಂಗ್ರೆಸ್ ಸಂವಿಧಾನದ ಬಗ್ಗೆ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಕಾಳಜಿ ವಹಿಸಲಿಲ್ಲ. ನಮಗೆ ಅವಕಾಶ ಸಿಕ್ಕಾಗ, ಅವರು ಎಸ್‌ಸಿ/ಎಸ್‌ಟಿ ಕೋಟಾದಿಂದ ಕೆತ್ತಿದ ಮುಸ್ಲಿಂ ಕೋಟಾವನ್ನು ನಾವು ಪೂರ್ಣಗೊಳಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com