ನೂಡಲ್ಸ್‌ ಪ್ಯಾಕೆಟ್‌ನಲ್ಲಿ ಬಚ್ಚಿಟ್ಟಿದ್ದ 2.02 ಕೋಟಿ ರೂ. ಮೌಲ್ಯದ ವಜ್ರ ವಶ, ಪ್ರಯಾಣಿಕನ ಬಂಧನ

ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯು ನಡೆಸಿದ ತಪಾಸಣೆಯಲ್ಲಿ ನ್ಯೂಡಲ್ಸ್ ಮತ್ತು ದೇಹದ ಭಾಗಗಳಲ್ಲಿ ಬಚ್ಚಿಟ್ಟಿದ್ದ ವಜ್ರಗಳು ಹಾಗೂ ಚಿನ್ನವನ್ನು ಪ್ರಯಾಣಿಕರಿಂದ ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಡಲ್ಸ್
ನ್ಯೂಡಲ್ಸ್

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯು ನಡೆಸಿದ ತಪಾಸಣೆಯಲ್ಲಿ ನ್ಯೂಡಲ್ಸ್ ಮತ್ತು ದೇಹದ ಭಾಗಗಳಲ್ಲಿ ಬಚ್ಚಿಟ್ಟಿದ್ದ ವಜ್ರಗಳು ಹಾಗೂ ಚಿನ್ನವನ್ನು ಪ್ರಯಾಣಿಕರಿಂದ ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4.44 ಕೋಟಿ ರೂ. ಮೌಲ್ಯದ 6.8 ಕೆಜಿಗೂ ಹೆಚ್ಚು ಚಿನ್ನ ಮತ್ತು 2.02 ಕೋಟಿ ರೂ. ವಜ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಬೈನಿಂದ ಬ್ಯಾಂಕಾಕ್‌ಗೆ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಪಾಸಣೆಗೊಳಪಡಿಸಿದಾಗ ತನ್ನ ಟ್ರಾಲಿ ಬ್ಯಾಗ್‌ನಲ್ಲಿ ನ್ಯೂಡಲ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟುಕೊಂಡು ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ. ನಂತರ ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ನ್ಯೂಡಲ್ಸ್
ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನಿಂದ 98.68 ಲಕ್ಷ ರೂ. ಮೌಲ್ಯದ ಚಿನ್ನ ವಶ

ಕೊಲಂಬೊದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರನ್ನು ತಪಾಸಣೆಗೊಳಪಡಿಸಲಾಗಿದ್ದು, ಆಕೆಯ ಒಳ ಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 321 ಗ್ರಾಂ ತೂಕದ ಚಿನ್ನದ ತುಂಡುಗಳು ಮತ್ತು ಕಟ್ ಪೀಸ್ ಅನ್ನು ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಅಲ್ಲದೆ, ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು ಮತ್ತು ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ಬಂದ ತಲಾ ಒಬ್ಬರು ಸೇರಿದಂತೆ 10 ಭಾರತೀಯ ಪ್ರಜೆಗಳನ್ನು ಸಹ ತಪಾಸಣೆ ನಡೆಸಲಾಗಿದ್ದು, 4.04 ಕೋಟಿ ರೂ. ಮೌಲ್ಯದ 6.199 ಕೆಜಿ ಚಿನ್ನವನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ನಂತರ ಅವರಲ್ಲಿ ಮೂವರನ್ನು ಬಂಧಿಸಲಾಯಿತು ಎಂದು ಅದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com