Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.
ಕೇಜ್ರಿವಾಲ್-ಕವಿತಾ
ಕೇಜ್ರಿವಾಲ್-ಕವಿತಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ಹೌದು.. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು BRS ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್-ಕವಿತಾ
ಕೇಜ್ರಿವಾಲ್ ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಲಹಾ ತಂಡ ರಚಿಸುವಂತೆ AIIMSಗೆ ಕೋರ್ಟ್ ಸೂಚನೆ

ಉಭಯ ನಾಯಕರ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಸಿಬಿಐ ಮತ್ತು ಇಡಿ ವಿಷಯಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರು ಪಡಿಸಲಾಯಿತು. ಈ ವೇಳೆ ವಾದ ಆಲಿಸಿದ ನ್ಯಾಯಾಧೀಶರು ಮೇ 7ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದರು.

ಅಂದಹಾಗೆ ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ತೆಲಂಗಾಣ ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಮತ್ತು ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಲಾಗಿದೆ.

ಕೇಜ್ರಿವಾಲ್-ಕವಿತಾ
Arvind Kejriwal ಕಳ್ಳಾಟ? ಶುಗರ್ ಹೆಚ್ಚಿಸಿಕೊಂಡು ಜಾಮೀನು ಪಡೆಯಲು ಜೈಲಲ್ಲಿ ಹೆಚ್ಚು ಮಾವು, ಸಿಹಿ ಸೇವನೆ: ED ಆರೋಪ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com