ಪ್ರಧಾನಿ ಮೋದಿ, ರಾಹುಲ್ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಿಜೆಪಿ, ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಭಜನೆ ಮತ್ತು ಮಾನಹಾನಿಕರ ಭಾಷಣ ಮಾಡಿದ್ದಾರೆ ಎಂಬ ಪ್ರತಿಪಕ್ಷದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ಜಾರಿ ಮಾಡಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ನವದೆಹಲಿ: ಪ್ರಧಾನಿಯೊಬ್ಬರ ವಿರುದ್ಧ ಮೊದಲ ಬಾರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ದಾಖಲಿಸಿಕೊಂಡಿರುವ ಚುನಾವಣಾ ಆಯೋಗ, ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಭಜನೆ ಮತ್ತು ಮಾನಹಾನಿಕರ ಭಾಷಣ ಮಾಡಿದ್ದಾರೆ ಎಂಬ ಪ್ರತಿಪಕ್ಷದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಹಾಗೆಯೇ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಸಲ್ಲಿಸಿರುವ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಇಬ್ಬರೂ ಎಐಸಿಸಿ ಅಧ್ಯಕ್ಷರಿಗೂ ಪ್ರತ್ಯೇಕ ನೋಟಿಸ್ ನೀಡಿದೆ.

ಚುನಾವಣಾ ಆಯೋಗ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ಭಾಷಣದ ಬಗ್ಗೆ BJP ಪ್ರತಿಕ್ರಿಯೆ ಕೇಳಿದ EC

ಏಪ್ರಿಲ್ 21 ರಂದು ಬನ್ಸ್ವಾರಾದಲ್ಲಿ ಮೋದಿ ಅವರು ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್, ಸಿಪಿಐ, ಸಿಪಿಐ (ಎಂಎಲ್) ಮತ್ತು ನಾಗರಿಕ ಸಮಾಜ ಗುಂಪುಗಳು ಸಲ್ಲಿಸಿದ ದೂರುಗಳಿಗೆ ಸೋಮವಾರದೊಳಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗವು ನಡ್ಡಾ ಅವರಿಗೆ ಕಳುಹಿಸಿದ ನೋಟಿಸ್‌ನಲ್ಲಿ ಕೋರಿದೆ. ಕಾಂಗ್ರೆಸ್ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲು ಬಯಸಿದೆ ಮತ್ತು ವಿರೋಧ ಪಕ್ಷವು ಮಹಿಳೆಯರ ಮಂಗಳಸೂತ್ರವನ್ನು ಸಹ ಬಿಡುವುದಿಲ್ಲ ಎಂಬ ಮೋದಿಯವರ ಆರೋಪಗಳನ್ನು ಈ ದೂರುಗಳು ಉಲ್ಲೇಖಿಸಿವೆ.

ಚುನಾವಣಾ ಆಯೋಗ
ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗ ಮಾಡಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ವಾಗ್ದಾಳಿ

ಈ ಭಾಷಣ ಪ್ರಮುಖ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಅನ್ಯಾಯ ಮಾಡುತ್ತಾ ಮುಸ್ಲಿಂ ತುಷ್ಟೀಕರಣ ರಾಜಕಾರಣವನ್ನು ಪೋಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಗಮನಿಸಲು" ಪಕ್ಷದ ಎಲ್ಲಾ ಸ್ಟಾರ್ ಪ್ರಚಾರಕರ ಗಮನಕ್ಕೆ ತರಲು ನಡ್ಡಾಗೆ ಸೂಚಿಸಿರುವ ಚುನಾವಣಾ ಆಯೋಗ, ಉನ್ನತ ಹುದ್ದೆಯಲ್ಲಿರುವವರು ಮಾಡುವ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com