ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ಭಾಷಣದ ಬಗ್ಗೆ BJP ಪ್ರತಿಕ್ರಿಯೆ ಕೇಳಿದ EC

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಜೆಪಿ ಸೂಚಿಸಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಬಿಜೆಪಿ ಸೂಚಿಸಿದೆ.

ಮೋದಿ ಭಾಷಣದ ಬಗ್ಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ನೀಡಿರುವ ದೂರಿನ ಮೇರೆಗೆ ಚುನಾವಣಾ ಆಯೋಗ ಬಿಜೆಪಿಯಿಂದ ಪ್ರತಿಕ್ರಿಯೆ ಕೇಳಿದೆ.

ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಚುನಾವಣಾ ಆಯೋಗ ಗಮನಿಸಿದೆ. ಪ್ರಧಾನಿ ಮೋದಿ, ರಾಹುಲ್ ಗಾಂಧಿ ವಿರುದ್ಧದ ನೀತಿ ಸಂಹಿತ ಉಲ್ಲಂಘನೆ ಆರೋಪಗಳನ್ನು ಬಿಜೆಪಿ, ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಚುನಾವಣಾ ಹಂಚಿಕೊಂಡಿದೆ ಮತ್ತು ಏಪ್ರಿಲ್ 29 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ನರೇಂದ್ರ ಮೋದಿ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ: ಮೋದಿ ಹೇಳಿಕೆ ವಿರೋಧಿಸಿ EC ಗೆ 17 ಸಾವಿರಕ್ಕೂ ಹೆಚ್ಚು ಭಾರತೀಯರು ಪತ್ರ!

ಉನ್ನತ ಹುದ್ದೆಯಲ್ಲಿರುವವರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಧಾನಿ ಮೋದಿ ಹೇಳಿಕೆ "ಒಡಕುಂಟು ಮಾಡುವ", "ದುರುದ್ದೇಶಪೂರಿತ" ಮತ್ತು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿದೆ ಎಂದು ಆರೋಪಿಸಿ ಕಳೆದ ಸೋಮವಾರ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ನರೇಂದ್ರ ಮೋದಿ
ಮುಸ್ಲಿಮರಿಗೆ ದೇಶದ ಸಂಪತ್ತು ಹಂಚಿಕೆ ಹೇಳಿಕೆ: ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com