ಅರುಣಾಚಲದಲ್ಲಿ ಭೂಕುಸಿತ: ಭಾರೀ ಮಳೆಗೆ ಕೊಚ್ಚಿ ಹೋದ ಹೆದ್ದಾರಿ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌!

ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ಚೀನಾ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತವಾಗಿದೆ.
ಭೂಕುಸಿತ
ಭೂಕುಸಿತ

ಗುವಾಹಟಿ: ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ಚೀನಾ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತವಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ. ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕಡಿದುಹೋಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ನಲ್ಲಿ ಸಾಮಾಜಿಕ ಜಾಲತಾದಲ್ಲಿ ಪೋಸ್ಟ್ ಮಾಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಭೂಕುಸಿತ
ಉತ್ತರಾಖಂಡ: ಗೌರಿಕುಂಡ್ ಬಳಿ ಭೂಕುಸಿತ, 12 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಆರಂಭ

ಈ ನಡುವೆ ರಸ್ತೆ ಕೊಚ್ಚಿ ಹೋಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹೆದ್ದಾರಿಯ ಒಂದು ಭಾಗವೇ ಕಾಣೆಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದರಿಂದಾಗಿ ವಾಹನಗಳು ಇನ್ನೊಂದು ಬದಿಗೆ ಸಾಗಲಾಗದೇ ನಿಂತಿವೆ. ಈ ಹೆದ್ದಾರಿ ಚೀನಾ ಗಡಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು, ಸ್ಥಳೀಯ ಜನರ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಇಂತಹ ಹೆದ್ದಾರಿ ಈಗ ಕುಸಿತಗೊಂಡಿರುವುದರಿಂದ ಸ್ಥಳೀಯರು ಹಾಗೂ ಭದ್ರತಾ ಪಡೆ ಇಬ್ಬರು ತೊಂದರೆಗೊಳಗಾಗುವಂತಾಗಿದೆ.

ಸದ್ಯಕ್ಕೆ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ಹೆದ್ದಾರಿಯ ಹಾನಿಗೊಳಗಾದ ರಸ್ತೆಯನ್ನು ಸರಿಪಡಿಸಲು ಸಂಪನ್ಮೂಲಗಳನ್ನು ಸಂಗ್ರಹಿಸಿದೆ.

ಸದ್ಯಕ್ಕೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳಿಗೆ ಈಗ ಅಲ್ಲಿ ತೊಂದರೆ ಉಂಟಾಗಿಲ್ಲ, ರಾಜ್ಯ ಸರ್ಕಾರವೂ ಪ್ರಯಾಣಿಕರಿಗೆ ಸಲಹಾ ಸುತ್ತೋಲೆಯನ್ನು ಹೊರಡಿಸಿದ್ದು, ಈ ರಸ್ತೆಯ ಮರು ನಿರ್ಮಾಣಕ್ಕೆ ಕನಿಷ್ಠ 3 ದಿನಗಳು ಹಿಡಿಯಲಿವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com