ಬಾರಾಮುಲ್ಲಾ ಎನ್ಕೌಂಟರ್: ಇಬ್ಬರು ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರವೂ ಗುಂಡಿನ ದಾಳಿ ಮುಂದುವರೆದಿದೆ.

ಎನ್ಕೌಂಟರ್ ನಲ್ಲಿ ಇದೂವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದು, ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಗ್ರಹ ಚಿತ್ರ
ಜಮ್ಮು ಕಾಶ್ಮೀರ ಎನ್ಕೌಂಟರ್: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಛಾಯಾಗ್ರಾಹಕ, ಪ್ರವಾಸಿಗ, ಹವ್ಯಾಸಿ ಜಾದೂಗಾರ!

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದು, ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com