ಚುನಾವಣಾ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ: ಛತ್ತೀಸ್‌ಗಢದ ಗರಿಯಾಬಂದ್ ನಲ್ಲಿ ದುರ್ಘಟನೆ

ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೀಸಲು ತಂಡದಲ್ಲಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಗರಿಯಾಬಂದ್: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಘಟನೆ ನಡೆದಿದ್ದು, ಚುನಾವಣಾ ಕರ್ತವ್ಯದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೀಸಲು ತಂಡದಲ್ಲಿದ್ದರು. ಸಕ್ರಿಯ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರಲಿಲ್ಲ.

ಪವಾರ್ ಅವರು ಎಂಪಿ ವಿಶೇಷ ಸಶಸ್ತ್ರ ಪಡೆಯ ಬೆಟಾಲಿಯನ್ ನಂ.34 ಗೆ ಸೇರಿದವರು. ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

(ನಿಮಗೆ ಆತ್ಮಹತ್ಯಾ ಆಲೋಚನೆಗಳು ಇದ್ದಲ್ಲಿ ಅಥವಾ ಭಾವನಾತ್ಮಕ ಬೆಂಬಲ ಬೇಕಾದರೆ ಸ್ನೇಹ ಫೌಂಡೇಶನ್ - 04424640050, ಟೆಲಿ ಮನಸ್ - 14416 (ಲಭ್ಯವಿದೆ 24x7) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್' ಸಹಾಯವಾಣಿ - 02225521111 ಇಲ್ಲಿಗೆ ಸಂಪರ್ಕಿಸಬಹುದು. ಇದು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ.)

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com