ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಪ್ರಜ್ಞಾ ಠಾಕೂರ್ ನ್ಯಾಯಾಲಯಕ್ಕೆ ಹಾಜರು!

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಿದ್ದಾರೆ.
ಪ್ರಜ್ಞಾ ಸಿಂಗ್ ಠಾಕೂರ್
ಪ್ರಜ್ಞಾ ಸಿಂಗ್ ಠಾಕೂರ್

ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಿದ್ದಾರೆ.

ಈ ಹಿಂದೆ ಹಲವು ಸಂದರ್ಭಗಳಲ್ಲಿ ಅನಾರೋಗ್ಯದ ನೆಪವೊಡ್ಡಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರಿಂದ ವಿಶೇಷ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಏಪ್ರಿಲ್ 25 ರಂದು ಠಾಕೂರ್ ಹಾಜರಾಗಲು ವಿಫಲವಾದರೆ, ನಂತರ ಕ್ರಮ ಎದುರಿಸಬೇಕಾಗುತ್ತದೆ ಎಂದು ಹೇಳಿತ್ತು.

ಗುರುವಾರ ತನಿಖೆ ನಡೆಸಿದ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು, ಆದರೆ ಅವರು ಇನ್ನೂ ಅನಾರೋಗ್ಯದಿಂದ ಇರುವುದಾಗಿ ಅವರು ಹೇಳಿದ್ದಾರೆ. ಠಾಕೂರ್ ತನ್ನ ಹೇಳಿಕೆಯನ್ನು ಪ್ರಶ್ನೋತ್ತರ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ಹಠಾತ್ ಅಂಗೈಯಲ್ಲಿ ಶಕ್ತಿ ಕಳೆದುಕೊಂಡಿದ್ದರಿಂದ ಕಾಗದಕ್ಕೆ ಸಹಿ ಹಾಕಲು ಸಾಧ್ಯವಾಗದ ಕಾರಣ ಹೇಳಿಕೆಯ ಮೇಲೆ ಹೆಬ್ಬೆರಳಿನ ಗುರುತನ್ನು ಹಾಕಲು ಅನುಮತಿ ಕೋರಿ ಅರ್ಜಿಯನ್ನೂ ಸಲ್ಲಿಸಿದರು. ನ್ಯಾಯಾಲಯ ಅದಕ್ಕೆ ಅನುಮತಿ ನೀಡಿತು.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯಿದೆ, ಭಾರತೀಯ ಶಸ್ತ್ರಾಸ್ತ್ರ ಕಾಯಿದೆ ಮತ್ತು ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಠಾಕೂರ್ ಜೊತೆಗೆ ಇತರ ಆರು ಮಂದಿ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ನ್ಯಾಯಾಲಯ ಪ್ರಸ್ತುತ ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 313 ರ ಅಡಿಯಲ್ಲಿ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ.

ಪ್ರಜ್ಞಾ ಸಿಂಗ್ ಠಾಕೂರ್
ಮಾಲೆಗಾಂವ್ ಸ್ಫೋಟ: ವಾರಕ್ಕೊಮ್ಮೆ ಕೋರ್ಟ್ ಗೆ ಹಾಜರಾಗುವಂತೆ ಪ್ರಗ್ಯಾ ಸಿಂಗ್, ಇತರರಿಗೆ ಸೂಚನೆ
ಪ್ರಜ್ಞಾ ಸಿಂಗ್ ಠಾಕೂರ್
ಮಾಲೆಗಾಂವ್ ಸ್ಪೋಟ: ಪುರೋಹಿತ್, ಸಾದ್ವಿ ಮತ್ತು ಐವರ ವಿರುದ್ಧ ದೋಷಾರೋಪ ಪಟ್ಟಿ

ಸೆಪ್ಟೆಂಬರ್ 29, 2008 ರಂದು ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಾಸಿಕ ಜಿಲ್ಲೆಯ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಕಟ್ಟಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಾಗ ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಕಳೆದ ತಿಂಗಳು, ನ್ಯಾಯಾಲಯ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಠಾಕೂರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ನಂತರ ಆಕೆ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾದ್ದರಿಂದ ವಾರಂಟ್ ರದ್ದುಗೊಳಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com