ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ 'ಅತ್ಯಂತ ಕ್ರೂರವಾಗಿ' ವರ್ತಿಸಿದೆ: ಸುಪ್ರೀಂ ಕೋರ್ಟ್ ಗೆ ಕೇಜ್ರಿವಾಲ್

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು(ಇಡಿ) "ಅತ್ಯಂತ ಕ್ರೂರವಾಗಿ" ವರ್ತಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು(ಇಡಿ) "ಅತ್ಯಂತ ಕ್ರೂರವಾಗಿ" ವರ್ತಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಇಡಿ ಸಲ್ಲಿಸಿದ ಅಫಿಡವಿಟ್‌ಗೆ ಪ್ರತ್ಯುತ್ತರ ನೀಡಿರುವ ಕೇಜ್ರಿವಾಲ್ ಅವರು, ತಾನು ಯಾವಾಗಲೂ ತನಿಖೆಗೆ ಸಹಕರಿಸಿರುವುದಾಗಿ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ, 9 ಬಾರಿ ಸಮನ್ಸ್ ನೀಡಿದರೂ ತನಿಖಾಧಿಕಾರಿ(ಐಒ) ಮುಂದೆ ಹಾಜರಾಗದಿರುವುದು ಅವರ ಬಂಧನಕ್ಕೆ ಪ್ರಮುಖ ಕಾರಣ ಎಂದು ಇಡಿ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಬಂಧನ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ತ್ವರಿತ ವಿಚಾರಣೆಗೆ ಕೇಜ್ರಿವಾಲ್ ಮನವಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್ ಅಬಕಾರಿ ಹಗರಣದ ಕಿಂಗ್‌ಪಿನ್, ಕಿಕ್‌ಬ್ಯಾಕ್ ಗೆ ಬೇಡಿಕೆ: ಸುಪ್ರೀಂ ಕೋರ್ಟ್ ಗೆ ED

"ಇಡಿಯ ಪ್ರತಿ ಸಮನ್ಸ್ ಗೂ ಸರಿಯಾಗಿ ಪ್ರತಿಕ್ರಿಯೆ ನೀಡಲಾಗಿದೆ. ಬರವಣಿಗೆ ಮೂಲಕ ಅಥವಾ ವರ್ಚವಲ್ ಆಗಿ ಉತ್ತರ ನೀಡಲು ಅಥವಾ ಹಾಜರಾಗಲು ಅವಕಾಶಗಳು ಇರುವಾಗ ಭೈತಿಕ ಉಪಸ್ಥಿತಿಯನ್ನೇ ಬೇಡುವುದು ಎಷ್ಟು ಸರಿ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಅಲ್ಲದೆ ತಮ್ಮ ಮನವಿ ಪರಿಗಣನೆಗೆ ಅರ್ಹವಾಗಿದ್ದು, ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ದೆಹಲಿ ಸಿಎಂ ಕೋರಿದ್ದಾರೆ.

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದ್ದು, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com