ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಲ್ಮಾನ್ ಖಾನ್ - ಅನ್ಮೋಲ್ ಬಿಷ್ಣೋಯ್
ಸಲ್ಮಾನ್ ಖಾನ್ - ಅನ್ಮೋಲ್ ಬಿಷ್ಣೋಯ್

ಮುಂಬೈ: ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾದ ತಡೆ ಕಾಯ್ದೆ (ಮೋಕಾ) ಯನ್ನು ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಗುಂಡಿನ ದಾಳಿಯ ಹೊಣೆಯನ್ನು ಅನ್ಮೋಲ್ ಬಿಷ್ಣೋಯ್ ಹೊತ್ತುಕೊಂಡಿದ್ದು, ತನಿಖೆಯಿಂದಲೂ ಅವರು ಘಟನೆಯಲ್ಲಿ ಪಾಲ್ಗೊಂಡಿರುವುದನ್ನು ದೃಢಪಡಿಸಿದೆ. ಹೀಗಾಗಿ, ಮುಂಬೈ ಪೊಲೀಸರು ಶುಕ್ರವಾರ ಲುಕೌಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಲ್ಮಾನ್ ಖಾನ್ - ಅನ್ಮೋಲ್ ಬಿಷ್ಣೋಯ್
ನಟ ಸಲ್ಮಾನ್ ಖಾನ್ ನಿವಾಸದ ಹೊರಗಡೆ ಗುಂಡಿನ ದಾಳಿ: ಪಂಜಾಬ್‌ನಲ್ಲಿ ಮತ್ತಿಬ್ಬರು ಬಂಧನ

'ಪ್ರಕರಣದಲ್ಲಿ ಅನ್ಮೋಲ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರನ್ನು ವಾಂಟೆಡ್ ಆರೋಪಿಗಳೆಂದು ಹೆಸರಿಸಲಾಗಿದೆ. ಅನ್ಮೋಲ್ ಬಿಷ್ಣೋಯ್ ಕೆನಡಾದಲ್ಲಿ ಉಳಿದುಕೊಂಡಿದ್ದು, ಯುಎಸ್ಎಗೆ ಪ್ರಯಾಣಿಸುತ್ತಿದ್ದಾರೆ. ಆದರೆ, ದಾಳಿಯ ಹೊಣೆ ಹೊತ್ತುಕೊಂಡು ಹಾಕಿದ್ದ ಫೇಸ್‌ಬುಕ್ ಪೋಸ್ಟ್‌ನ ಐಪಿ ವಿಳಾಸವನ್ನು ಪರಿಶೀಲಿಸಿದಾಗ ಅದು ಪೋರ್ಚುಗಲ್‌ನಲ್ಲಿ ಪತ್ತೆಯಾಗಿದೆ' ಎಂದು ಅಧಿಕಾರಿ ಹೇಳಿದರು.

ಏಪ್ರಿಲ್ 14ರ ಮುಂಜಾನೆ ಸಲ್ಮಾನ್ ಖಾನ್ ಅವರ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌‌ನಲ್ಲಿರುವ ನಿವಾಸದ ಹೊರಗೆ ಮೋಟಾರ್‌ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದು, ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಸಲ್ಮಾನ್ ಖಾನ್ - ಅನ್ಮೋಲ್ ಬಿಷ್ಣೋಯ್
ಸಲ್ಮಾನ್ ಖಾನ್ ನಿವಾಸದ ಹೊರಗೆ ಫೈರಿಂಗ್: ತಾಪಿ ನದಿಯಲ್ಲಿ ಎರಡು ಪಿಸ್ತೂಲ್, ಮ್ಯಾಗಜೀನ್‌ಗಳು ಪತ್ತೆ

ಘಟನೆಗೆ ಸಂಬಂಧಿಸಿದಂತೆ ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಂಬುವವರನ್ನು ಬಂಧಿಸಲಾಗಿದೆ. ಇದರೊಂದಿಗೆ ಆರೋಪಿಗಳಿಗೆ ಎರಡು ದೇಸೀ ನಿರ್ಮಿತ ಪಿಸ್ತೂಲ್ ಒದಗಿಸಿದ ಆರೋಪದ ಮೇರೆಗೆ ಸೋನು ಕುಮಾರ್ ಸುಭಾಷ್ ಚಂದರ್ ಬಿಷ್ಣೋಯ್ (37) ಮತ್ತು ಅನುಜ್ ಥಾಪನ್ (32) ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com