ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ.

ಘಟನೆಯ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಅಸನ್ಸೋಲ್​ನಲ್ಲಿ ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ.

ಮಮತಾ ಬ್ಯಾನರ್ಜಿ
ಬಿಜೆಪಿ ಪ್ರಚಾರಕ್ಕೆ ಸಹಾಯ ಮಾಡಲು ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ: ಮಮತಾ

ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಅವರು ಎರಡನೇ ಬಾರಿ ಗಾಯಗೊಂಡಿದ್ದಾರೆ. ಮಾರ್ಚ್ 14 ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದಲ್ಲಿ ಬಿದ್ದು ಅವರ ಹಣೆ ಮತ್ತು ಮೂಗಿನ ಮೇಲೆ ಗಾಯವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com