ಉತ್ತರ ಪ್ರದೇಶ: ಅನೇಕ ಎಸ್ ಪಿ ನಾಯಕರು ಬಿಜೆಪಿ ಸೇರ್ಪಡೆ, ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹಿನ್ನಡೆ

ಲೋಕಸಭೆ ಚುನಾವಣೆಯ ನಡುವೆ ಉತ್ತರ ಪ್ರದೇಶದಲ್ಲಿ ಅನೇಕ ಸಮಾಜವಾದಿ ಪಕ್ಷದ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಲೋಕಸಭೆ ಚುನಾವಣೆಯ ನಡುವೆ ಉತ್ತರ ಪ್ರದೇಶದಲ್ಲಿ ಅನೇಕ ಸಮಾಜವಾದಿ ಪಕ್ಷದ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಲಖನೌ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಜೈ ಚೌಬೆ ಮತ್ತು ಬಲರಾಮ್ ಯಾದವ್ ಮತ್ತು ಜಗತ್ ಜೈಸ್ವಾಲ್ ಸೇರಿದಂತೆ ಹಲವಾರು ನಾಯಕರು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಇದರಿಂದಾಗಿ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್‌ಪಿಯ 4 ಶಾಸಕರಿಗೆ Y-ಕೆಟಗರಿ ಭದ್ರತೆ

ಈ ಸಂದರ್ಭದಲ್ಲಿ ಮಾತನಾಡಿದ ಪಾಠಕ್, ಮಾಜಿ ಶಾಸಕರು ಮತ್ತು ಹಲವಾರು ಜಿಲ್ಲಾಧ್ಯಕ್ಷರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬ್ಲಾಕ್ ಮಟ್ಟದಲ್ಲಿ ಕೆಲಸ ಮಾಡುವವರೂ ಅವರೊಂದಿಗೆ ಬರುತ್ತಿದ್ದಾರೆ, ಅವರ ಕೈಯಲ್ಲಿ ದೊಡ್ಡ ಜವಾಬ್ದಾರಿ ಇದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಜನಸಾಮಾನ್ಯರನ್ನು ತಲುಪಿದೆ. ಅವರ ಮಾರ್ಗದರ್ಶನದಲ್ಲಿ ನಾವು 'ವಿಕಸಿತ ಭಾರತ' ಸಂಕಲ್ಪವನ್ನು ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.

ಸಂಸತ್ತಿಗೆ ಗರಿಷ್ಠ ಸಂಖ್ಯೆಯ 80 ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶದಲ್ಲಿ ಎಲ್ಲಾ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಎಂಟು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆದಿದ್ದು, ಇತರ ಎಂಟು ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com