ಅಸ್ಸಾಂ: ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ 'ಮಳೆಯಲ್ಲಿಯೇ ಡ್ಯಾನ್ಸ್' ಮಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! ವಿಡಿಯೋ

ಈಶಾನ್ಯ ರಾಜ್ಯ ಅಸ್ಸಾಂನ ಕೊಕ್ರಜಾರ್ ನಲ್ಲಿ ನಡೆದ ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಳೆಯಲ್ಲಿಯೇ ಡ್ಯಾನ್ಸ್ ಮಾಡಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ

ಕೊಕ್ರಜಾರ್: ಈಶಾನ್ಯ ರಾಜ್ಯ ಅಸ್ಸಾಂನ ಕೊಕ್ರಜಾರ್ ನಲ್ಲಿ ನಡೆದ ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಳೆಯಲ್ಲಿಯೇ ಡ್ಯಾನ್ಸ್ ಮಾಡಿದ್ದಾರೆ. ಅಸ್ಸಾಂ ಬಿಜೆಪಿಯ ಥೀಮ್ ಸಾಂಗ್ '' ಮತ್ತೊಮ್ಮೆ ಮೋದಿ ಸರ್ಕಾರ" ಗೀತೆಗೆ ಸುರಿಯುವ ಮಳೆ ನಡುವೆ ವೇದಿಕೆ ಮೇಲೆ ಸಿಎಂ ನೃತ್ಯ ಮಾಡಿದ್ದಾರೆ. ವೇದಿಕೆ ಬಳಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದ ಸಾರ್ವಜನಿಕರು ಮಳೆಯನ್ನು ಲೆಕ್ಕಿಸದೆ ನಿಂತಲ್ಲೇ ಹೆಜ್ಜೆ ಹಾಕಿದ್ದಾರೆ. ಮಹಿಳೆಯರು ಕೂಡಾ ಕುಣಿದು ಕುಪ್ಪಳಿಸಿದ್ದಾರೆ.

ಹಿಮಂತ ಬಿಸ್ವಾ ಶರ್ಮಾ
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಿಮಂತ ಬಿಸ್ವಾ ಶರ್ಮಾ ಹಂಚಿಕೊಂಡಿದ್ದಾರೆ. ಕೊಕ್ರಜಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೊರೆತ ಭಾರಿ ಬೆಂಬಲಕ್ಕೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದ್ದಾರೆ. ಬಿಜೆಪಿ ಮತ್ತು ಎನ್‌ಡಿಎ ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದರೆ ಪ್ರತಿಪಕ್ಷಗಳು ಅಸ್ತವ್ಯಸ್ತಗೊಂಡಿವೆ ಎಂದು ಅವರು ಫೋಸ್ಟ್ ಮಾಡಿದ್ದಾರೆ.

"ಇಂದು ಅಸ್ಸಾಂನ ಪ್ರತಿಯೊಂದು ಸಮುದಾಯವೂ ಶಾಂತಿಯಿಂದ ಬದುಕುತ್ತಿದೆ. ಇದು 10 ವರ್ಷಗಳ ಹಿಂದೆ ಸಾಧ್ಯವಿತ್ತೇ? ಎಂದು ಅವರು ಮತ್ತೊಂದು ಫೋಸ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಅಸ್ಸಾಂನ ನಾಲ್ಕು ಲೋಕಸಭಾ ಕ್ಷೇತ್ರಗಳಾದ ಗುವಾಹಟಿ, ಬಾರ್ಪೇಟಾ, ಕೊಕ್ರಜಾರ್ ಮತ್ತು ಧುಬ್ರಿಯಲ್ಲಿ ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com