ಲೋಕಸಭೆ ಚುನಾವಣೆ: ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದು, ಬಿಜೆಪಿ ಸೇರ್ಪಡೆ!

ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಕ್ಷಯ್ ಕಾಂತಿ ಬಾಮ್ ಅವರು ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಅಕ್ಷಯ್ ಕಾಂತಿ ಬಾಮ್ ಅವರೊಂದಿಗೆ ಕೈಲಾಶ್ ವಿಜಯ ವರ್ಗೀಯಾ
ಅಕ್ಷಯ್ ಕಾಂತಿ ಬಾಮ್ ಅವರೊಂದಿಗೆ ಕೈಲಾಶ್ ವಿಜಯ ವರ್ಗೀಯಾ
Updated on

ಇಂದೋರ್: ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಕ್ಷಯ್ ಕಾಂತಿ ಬಾಮ್ ಅವರು ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮೇ 13 ರಂದು ಮತದಾನ ನಡೆಯಲಿರುವ ಇಂದೋರ್ ಲೋಕಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಬಾಮ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಾಮ್ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಅಕ್ಷಯ್ ಕಾಂತಿ ಬಾಮ್ ಅವರೊಂದಿಗೆ ಕೈಲಾಶ್ ವಿಜಯ ವರ್ಗೀಯಾ
ನಾಮಪತ್ರ ತಿರಸ್ಕೃತಗೊಂಡಿದ್ದ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭನಿ ಪಕ್ಷದಿಂದ ಅಮಾನತು!

ಕೆಲ ಸಮಯದ ಹಿಂದೆ ಅಕ್ಷಯ್ ಕಾಂತಿ ಅವರು ಬಾಮ್ ರಮೇಶ್ ಮೆಂಡೋಲಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆದಿದ್ದಾರೆ. ಅಷ್ಟೇ ಅಲ್ಲದೇ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎನ್ನಲಾಗುತ್ತಿದೆ. ನಾಮಪತ್ರ ಹಿಂಪಡೆದ ಅಕ್ಷಯ್ ಕಾಂತಿ ಅವರ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ.

ಈ ಮಧ್ಯೆ ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವ ಕೈಲಾಶ್ ವಿಜಯ ವರ್ಗಿಯಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಕ್ಷಯ್ ಬಿಜೆಪಿ ಸೇರುವುದನ್ನು ಸ್ವಾಗತಿಸಿದ್ದಾರೆ. ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಕ್ಷಯ್ ಕಾಂತಿ ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇಂದೋರ್ ಲೋಕಸಭೆ ಚುನಾವಣೆಗೆ ಮೇ 13 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 25ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ಏಪ್ರಿಲ್ 29 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com