ಅಮಿತ್ ಶಾ ಹೇಳಿಕೆಯ ನಕಲಿ ವೀಡಿಯೋ ವೈರಲ್: ಪೊಲೀಸರಿಂದ FIR ದಾಖಲು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆದ್ದಾರೆ ಎನ್ನಲಾದ ನಕಲಿ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಗೃಹ ಸಚಿವಾಲಯದ ದೂರಿನ ನಂತರ ದೆಹಲಿ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆದ್ದಾರೆ ಎನ್ನಲಾದ ನಕಲಿ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಗೃಹ ಸಚಿವಾಲಯದ ದೂರಿನ ನಂತರ ದೆಹಲಿ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ಕೋಶವು ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಇದೀಗ ದೇಶಾದ್ಯಂತ ಬಂಧನಗಳು ನಡೆಯಲಿವೆ ಎಂದು ವಿಶೇಷ ಕೋಶದ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ
ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಾರ್ಖಂಡ್ ಹೈಕೋರ್ಟ್‌ನಿಂದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

'ಸಮುದಾಯಗಳ ನಡುವೆ ಅಸಂಗತತೆಯನ್ನು ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ನಕಲಿ ವೀಡಿಯೊಗಳನ್ನು ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ನೆಮ್ಮದಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ ಡಿಸಿ ಸಿಂಕು ಶರಣ್ ಸಿಂಗ್ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಕ್ರಮಕ್ಕಾಗಿ ವೀಡಿಯೋ ಹಂಚಿಕೊಳ್ಳಲಾದ ಲಿಂಕ್‌ಗಳನ್ನು ಸಹ ಲಗತ್ತಿಸಲಾಗಿದೆ. ಎಫ್‌ಐಆರ್‌ನ ಪ್ರತಿಯನ್ನು ದೆಹಲಿ ಸೈಬರ್ ಪೊಲೀಸ್‌ನ ಐಎಫ್‌ಎಸ್‌ಒ ಘಟಕಕ್ಕೂ ಕಳುಹಿಸಲಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com