ಗೋವಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಣಜಿ: ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ವಿಟಿ ಧನಂಜಯ ರಾವ್, ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಬಗ್ಗೆ ತಮ್ಮ ಕಚೇರಿಗೆ ಇಂದು ಬೆಳಗ್ಗೆ ಇಮೇಲ್ ಬಂದಿದೆ ಎಂದು ಹೇಳಿದ್ದಾರೆ.

"ನಾವು ಈಗ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆದರೆ ವಿಮಾನ ಕಾರ್ಯಾಚರಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ" ಎಂದು ರಾವ್ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್‌ಗೆ ಬಾಂಬ್ ಬೆದರಿಕೆ, ಎಫ್‌ಐಆರ್ ದಾಖಲು

ಗೋವಾ ಪೊಲೀಸರು ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಔಪಚಾರಿಕ ದೂರನ್ನು ಸ್ವೀಕರಿಸಿದ್ದಾರೆ ಮತ್ತು ಬಾಂಬ್ ನಿಷ್ಕ್ರಿಯ ದಳ ವಿಮಾನ ನಿಲ್ದಾಣವನ್ನು ಶೋಧಿಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಇಮೇಲ್‌ನ ಮೂಲವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ಹೇಳಿದ್ದಾರೆ. ದೇಶದ ಇತರ ವಿಮಾನ ನಿಲ್ದಾಣಗಳಿಗೂ ಈ ಬಗ್ಗೆ ತಿಳಿಸಲಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com