ಕಾಂಗ್ರೆಸ್ ನಿಂದ ಮತ್ತೊಂದು ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲೂ ಅಮೇಥಿ, ರಾಯ್ಬರೇಲಿ ಅಭ್ಯರ್ಥಿಗಳ ಘೋಷಣೆ ಇಲ್ಲ!

ಮೂರನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಮೇಥಿ ಹಾಗೂ ರಾಯ್ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ವಿಷಯದಲ್ಲಿ ಕಾಂಗ್ರೆಸ್ ಇನ್ನೂ ನಿಗೂಢ ನಡೆ ಅನುಸರಿಸಿದೆ.
ಕಾಂಗ್ರೆಸ್
ಕಾಂಗ್ರೆಸ್online desk

ಮೂರನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಮೇಥಿ ಹಾಗೂ ರಾಯ್ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ವಿಷಯದಲ್ಲಿ ಕಾಂಗ್ರೆಸ್ ಇನ್ನೂ ನಿಗೂಢ ನಡೆ ಅನುಸರಿಸಿದೆ.

ಲೋಕಸಭಾ ಚುನಾವಣೆಗೆ ಏ.30 ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೊಸ ಪಟ್ಟಿಯಲ್ಲಿ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಗುರ್ಗಾಂವ್ ಕ್ಷೇತ್ರದಿಂದ ರಾಜ್ ಬಬ್ಬರ್, ಹಿಮಾಚಲ ಪ್ರದೇಶದ ಕಂಗ್ರಾ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್
ಕಾಂಗ್ರೆಸ್ ಕೆಟ್ಟ, ವಿಭಜಕ ಗುಣ ಹೊಂದಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಮಾಜಿ ಶಾಸಕ ಸತ್ಪಾಲ್ ರೈಜಾದ ಅವರನ್ನು ಹಿಮಾಚಲ ಪ್ರದೇಶದ ಹಮಿಪುರ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಿಂದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಈ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಅನುರಾಗ್ ಠಾಕೂರ್ ಈ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಈ ಕ್ಷೇತ್ರವನ್ನು ಅನುರಾಗ್ ಠಾಕೂರ್ ಅವರ ತಂದೆ ಹಾಗೂ ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರು ಪ್ರತಿನಿಧಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com