ವಯನಾಡು ಭೂಕುಸಿತ ಪ್ರದೇಶಕ್ಕೆ ನಟ ಮೋಹನ್ ಲಾಲ್ ಭೇಟಿ; ಪುನರ್ವಸತಿ ಕಾರ್ಯಕ್ಕೆ 3 ಕೋಟಿ ರೂ. ನೆರವು ಘೋಷಣೆ

ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.
ನಟ ಮೋಹನ್ ಲಾಲ್
ನಟ ಮೋಹನ್ ಲಾಲ್
Updated on

ವಯನಾಡು: ಭಾರತೀಯ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರುವ ಖ್ಯಾತ ನಟ ಮೋಹನ್ ಲಾಲ್ ಅವರು ಶನಿವಾರ ಭೂಕುಸಿತ ಪೀಡಿತ ವಯನಾಡ್‌ಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ರೂ.3 ಕೋಟಿ ಆರ್ಥಿಕ ನೆರವನ್ನು ಪ್ರಕಟಿಸಿದ್ದಾರೆ.

ಸೇನಾ ಸಮವಸ್ತ್ರದಲ್ಲಿ ಮೆಪ್ಪಾಡಿಯ ಸೇನಾ ಶಿಬಿರಕ್ಕೆ ಆಗಮಿಸಿದ ನಟ, ಅಧಿಕಾರಿಗಳೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು. ಬಳಿಕ ಭೂಕುಸಿತ ಪೀಡಿತ ಪ್ರದೇಶಕ್ಕೆ ತೆರಳಿದರು. ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೋಹನ್‌ಲಾಲ್, ಅನಾಹುತದ ಪ್ರಮಾಣವನ್ನು ನೇರವಾಗಿ ವೀಕ್ಷಿಸಿದರೆ ಮಾತ್ರ ಅರ್ಥವಾಗುತ್ತದೆ. ಸೇನೆ, ನೌಕಾಪಡೆ, ವಾಯುಪಡೆ, ಎನ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ರಕ್ಷಣಾ, ಇತರ ಸಂಸ್ಥೆಗಳು, ಸ್ಥಳೀಯರು ಮುಂತಾದವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದರು.

ನಟ ಮೋಹನ್ ಲಾಲ್
ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ: ಸಿದ್ದರಾಮಯ್ಯ

ತಾನು ಕೂಡಾ ಭಾಗವಾಗಿರುವ ವಿಶ್ವಶಾಂತಿ ಪ್ರತಿಷ್ಠಾನ ಪುನರ್ವಸತಿ ಕಾರ್ಯಗಳಿಗೆ 3 ಕೋಟಿ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ. ಅಗತ್ಯವಿದ್ದರೆ ಹೆಚ್ಚಿನ ಹಣವನ್ನು ಒದಗಿಸಲಾಗುವುದು ಎಂದು ನಟ ಹೇಳಿದರು.

ನಟನಿಗೆ 2009 ರಲ್ಲಿ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ. ಈ ಮಧ್ಯೆ ಮೋಹನ್‌ಲಾಲ್ ಅವರೊಂದಿಗೆ ಬಂದ ಚಲನಚಿತ್ರ ನಿರ್ದೇಶಕ ಮೇಜರ್ ರವಿ, ಪಾಳುಬಿದ್ದಿರುವ ಮುಂಡಕ್ಕಾಯ್ ಶಾಲೆಯನ್ನು ಪ್ರತಿಷ್ಠಾನವ ಪುನರ್ನಿರ್ಮಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com