Khammam Bike Accident: ವೇಗವಾಗಿ ಬಂದು ನಿಂತಿದ್ದ ಲಾರಿ ಢಿಕ್ಕಿ; ಸ್ಕೂಟಿಯಲ್ಲಿದ್ದ ಮೂವರ ಸಾವು! Video

ಮೂವರು ಯುವಕರ ತಂಡ ದ್ವಿಚಕ್ರವಾಹನದಲ್ಲಿ ವೇಗವಾಗಿ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ನಲ್ಲಿದ್ದ ಸವಾರರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನ ತಲೆಯ ಮೆದುಳು ಹೊರಗೆ ಬಂದಿದೆ.
Two-Wheeler Collides With Lorry In Khammam
ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಢಿಕ್ಕಿ
Updated on

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭೀಕರ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದು ನಿಂತಿದ್ದ ಲಾರಿಗೆ ಢಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ವಿಡಿಯೋ ವೈರಲ್ ಆಗುತ್ತಿದೆ.

ಆಂಧ್ರ ಪ್ರದೇಶದ ಖಮ್ಮಂ ಜಿಲ್ಲೆಯ ಸತ್ತುಪಲ್ಲಿ ಮಂಡಲದಲ್ಲಿ ಈ ದುರ್ಘಟನೆ ನಡೆದಿದ್ದು, ಮೂವರು ಯುವಕರ ತಂಡ ದ್ವಿಚಕ್ರವಾಹನದಲ್ಲಿ ವೇಗವಾಗಿ ಬಂದಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ನಲ್ಲಿದ್ದ ಸವಾರರು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನ ತಲೆಯ ಮೆದುಳು ಹೊರಗೆ ಬಂದಿದೆ.

ಈ ಅಪಘಾತದ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಘಟನೆ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ಬೇತಿ ಸುರೇಶ್ (22), ಮುದ್ದಿನ ವೇಣು (19) ಮತ್ತು ಕರಿಮುಲ್ಲಾ (11) ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಂತೆಯೇ ಈ ಅಪಘಾತ ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವ ಪೋಷಕರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪೋಷಕರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com