ಅಯೋಧ್ಯೆ: ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರ, ಎಸ್‌ಪಿ ನಾಯಕನ ಮನೆ, ಬೇಕರಿ ಧ್ವಂಸ!

ಇಂದು ಬೆಳಗ್ಗೆ ಸಹಾಯಕ ಆಹಾರ ಆಯುಕ್ತ ಮಾಣಿಕಚಂದ್ ಸಿಂಗ್ ಬೇಕರಿ ಮೇಲೆ ದಾಳಿ ನಡೆಸಿದರು, ಈ ಸಂದರ್ಭದಲ್ಲಿ ಆಹಾರ ಉತ್ಪನ್ನಗಳ ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಂಡು ನಂತರ ಬೇಕರಿ ಸೀಲ್ ಮಾಡಲಾಯಿತು.
ಬೇಕರಿ ಧ್ವಂಸದ ಚಿತ್ರ
ಬೇಕರಿ ಧ್ವಂಸದ ಚಿತ್ರ
Updated on

ಲಖನೌ: ಅಯೋಧ್ಯೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರಿಗೆ ಸೇರಿದ ಬೇಕರಿ ಮತ್ತು ಮನೆಯನ್ನು ಜಿಲ್ಲಾಡಳಿತದ ಅಧಿಕಾರಿಗಳ ತಂಡ ಶನಿವಾರ ನೆಲಸಮಗೊಳಿಸಿದೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಆರೋಪ ಖಾನ್ ಮೇಲಿದೆ.

ಅಯೋಧ್ಯೆಯ ಬಿಕಾಪುರ್ ವಿಧಾನಸಭಾ ಕ್ಷೇತ್ರದ ಭದರ್ಸಾ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಕೆರೆ ಭೂಮಿಯಲ್ಲಿ ನಿರ್ಮಿಸಲಾಗಿದ ಬೇಕರಿಯನ್ನು ಧ್ವಂಸಗೊಳಿಸಲಾಗಿದೆ. ಕೆರೆಯ ಸಣ್ಣ ಭೂಮಿಯಲ್ಲಿ ಬೇಕರಿ ನಿರ್ಮಿಸಲಾಗಿತ್ತು. ಉಳಿದ ಭಾಗವನ್ನು ಕೃಷಿಗೆ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸಹಾಯಕ ಆಹಾರ ಆಯುಕ್ತ ಮಾಣಿಕಚಂದ್ ಸಿಂಗ್ ಬೇಕರಿ ಮೇಲೆ ದಾಳಿ ನಡೆಸಿದರು, ಈ ಸಂದರ್ಭದಲ್ಲಿ ಆಹಾರ ಉತ್ಪನ್ನಗಳ ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಂಡು ನಂತರ ಬೇಕರಿ ಸೀಲ್ ಮಾಡಲಾಯಿತು. ಇದರ ಬೆನ್ನಲ್ಲೇ ಬೇಕರಿ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಜಮೀನಿನಲ್ಲಿ ಬೇಕರಿ ನಿರ್ಮಿಸಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯ ಮನೆಯನ್ನು ಕೆಡವಬಹುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಬೇಕರಿ ಧ್ವಂಸದ ಚಿತ್ರ
8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಕೊಲೆ ಮಾಡಿ ಕಾಲುವೆಗೆ ಎಸೆದಿದ್ದ 3 ಅಪ್ರಾಪ್ತ ಬಾಲಕರ ಬಂಧನ

ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜಕೀಯ ಆಟವಾಡುತ್ತಿದೆ ಎಂದು ಖಾನ್ ಗೆ ಆಪ್ತರಾಗಿರುವ ಸಂಸದ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ಸಂತ್ರಸ್ತೆಗೆ ಡಿಎನ್ ಎ ಪರೀಕ್ಷ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡಾ ಡಿಎನ್ಎ ಪರೀಕ್ಷೆಗೆ ಆಗ್ರಹಿಸಿದ್ದಾರೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ 12 ವರ್ಷದ ಬಾಲಕಿ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಮೊಯಿದ್ ಖಾನ್ ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com