ವಯನಾಡ್ ದುರಂತಕ್ಕೆ 'ಗೋಹತ್ಯೆ' ಕಾರಣ: ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಹೇಳಿಕೆ

ಎಲ್ಲೆಲ್ಲಿ ಗೋಹತ್ಯೆಗಳು ನಡೆಯುತ್ತವೆಯೋ, ಅಂತಹ ಸ್ಥಳಗಳಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಮುಂದುವರಿಯುತ್ತದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.
ಜ್ಞಾನದೇವ್ ಅಹುಜಾ
ಜ್ಞಾನದೇವ್ ಅಹುಜಾ
Updated on

ಜೈಪುರ: ಭೀಕರ ಭೂಕುಸಿತಕ್ಕೆ ದೇವರನಾಡೇ ನಲುಗಿ ಹೋಗಿದೆ. ಸಾವಿನ ಸುರಿʻಮಳೆʼಗೆ ವಯನಾಡಲ್ಲಿ ಮೃತರ ಸಂಖ್ಯೆ 350ರ ಗಡಿ ದಾಟಿದ್ದು, 6ನೇ ದಿನಕ್ಕೆ ಸೇನಾ ಕಾರ್ಯಾಚರಣೆ ಕಾಲಿಟ್ಟಿದೆ. ಘಟನಾ ಸ್ಥಳಗಳಲ್ಲಿ ಹೃದಯವಿದ್ರಾವಕ ದೃಶ್ಯಗಳು ಕಣ್ಣಿಗೆ ರಾಚುತ್ತಿವೆ. ಇಡೀ ದೇಶವನ್ನೇ ಈ ದೃಶ್ಯ ಕಂಡು ಕಂಬನಿ ಮಿಡಿದಿದೆ. ಆದ್ರೆ ರಾಜಸ್ಥಾನದ ಬಿಜೆಪಿ ನಾಯಕರೊಬ್ಬರು ನೀಡಿರುವ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನದ ಮಾಜಿ ಶಾಸಕ, ಬಿಜೆಪಿಯ ಹಿರಿಯ ನಾಯಕ ಜ್ಞಾನದೇವ್ ಅಹುಜಾ ದುರಂತಕ್ಕೆ ಕೇರಳದಲ್ಲಿನ ಗೋ ಹತ್ಯೆ ಚಟುವಟಿಕೆಗಳು ಕಾರಣ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಎಲ್ಲೆಲ್ಲಿ ಗೋಹತ್ಯೆಗಳು ನಡೆಯುತ್ತವೆಯೋ, ಅಂತಹ ಸ್ಥಳಗಳಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಮುಂದುವರಿಯುತ್ತದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.

ಮುಂದುವರಿದು ಮಾತನಾಡಿರುವ ಅವರು, ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತ ದುರಂತಗಳು ಗೋಹತ್ಯೆಯ ನೇರ ಪರಿಣಾಮವಾಗಿದೆ. ಕೇರಳದಲ್ಲಿ ಗೋಹತ್ಯೆಯ ಚಟುವಟಿಕೆಗಳನ್ನು ನಿಲ್ಲಿಸದೇ ಹೋದಲ್ಲಿ ಇದೇ ರೀತಿಯ ದುರಂತಗಳು ಸಂಭವಿಸುತ್ತಲೇ ಇರುತ್ತವೆ.

ಜ್ಞಾನದೇವ್ ಅಹುಜಾ
ಗಾಡ್ಗೀಳ್ ವರದಿ ನಿರ್ಲಕ್ಷಿಸಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿದ್ದು, ಒಂದು ಕೋಮಿನ ತುಷ್ಟೀಕರಣವೇ ವಯನಾಡ್ ದುರಂತಕ್ಕೆ ಕಾರಣ: ಯತ್ನಾಳ್

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಂತಹ ಭಾಗಗಳಲ್ಲಿ ಕೂಡ ಮೇಘ ಸ್ಫೋಟ ಹಾಗೂ ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಪದೇ ಪದೇ ಸಂಭವಿಸುತ್ತಲೇ ಇರುತ್ತವೆ. ಆದರೆ ಕೇರಳದಲ್ಲಿ ಸಂಭವಿಸಿದ ಘಟನೆಯಷ್ಟು ವಿನಾಶಕಾರಿ ಪರಿಣಾಮ ಅವು ಉಂಟುಮಾಡುವುದಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

2018 ರಿಂದ, ಗೋಹತ್ಯೆಯಲ್ಲಿ ತೊಡಗಿರುವ ಪ್ರದೇಶಗಳು ಇಂತಹ ದುರಂತ ಘಟನೆಗಳನ್ನು ಎದುರಿಸುತ್ತಿರುವ ಮಾದರಿಯನ್ನು ನಾವು ಗಮನಿಸಿದ್ದೇವೆ" ಎಂದು ಅಹುಜಾ ಹೇಳಿದ್ದಾರೆ. ಗೋಹತ್ಯೆ ನಿಲ್ಲದಿದ್ದರೆ ಕೇರಳದಲ್ಲಿ ಇದೇ ರೀತಿಯ ದುರಂತಗಳು ನಡೆಯುತ್ತಲೇ ಇರುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com