ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ: ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಹೀಗಾಗಿ ಹೈಕೋರ್ಟ್ ಆದೇಶದ ವಿರುದ್ಧ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆಯಾಗಿದ್ದು ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಹೀಗಾಗಿ ಹೈಕೋರ್ಟ್ ಆದೇಶದ ವಿರುದ್ಧ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದಾರೆ. ಮಾಹಿತಿಯ ಪ್ರಕಾರ, ಸಿಬಿಐನಿಂದ ಬಂಧನ ಮತ್ತು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದ್ದಾರೆ.

ಹೈಕೋರ್ಟ್ ಆದೇಶದ ನಂತರ ಇದೀಗ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಸಿಬಿಐ ಪ್ರಕರಣದಲ್ಲಿ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸುವ ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಇದರೊಂದಿಗೆ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಜಾಮೀನಿಗಾಗಿ ಕೆಳ ನ್ಯಾಯಾಲಯದ ಮೊರೆ ಹೋಗುವಂತೆ ಹೈಕೋರ್ಟ್ ಹೇಳಿದೆ.

ಅರವಿಂದ್ ಕೇಜ್ರಿವಾಲ್
Delhi excise policy case: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 3 ದಿನ CBI ವಶಕ್ಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com