
ನವದೆಹಲಿ: ಬಾಂಗ್ಲಾದೇಶದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಯಿಂದ ಮೂಡಿಸಿರುವ ಅಸ್ಥಿರತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಚಿವ ಸಂಪುಟ ಸಮಿತಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಬಾಂಗ್ಲಾ ಪರಿಸ್ಥಿತಿಯ ಕುರಿತ ಸಂಪೂರ್ಣ ಮಾಹಿತಿಯನ್ನು ಮೋದಿ ಪಡೆದಿದ್ದಾರೆ.
ಬಾಂಗ್ಲಾದಲ್ಲಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿದ್ದಾರೆ. ಇಲ್ಲಿಂದ ಅವರು ಲಂಡನ್ ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವ ಸಂಪುಟ ಸಮಿತಿಯ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದರು.
ಸಭೆಯಲ್ಲಿ ಅಧಿಕಾರಿಗಳು ಬಾಂಗ್ಲಾ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ವಿವರ ನೀಡಿದ್ದಾರೆ. ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Advertisement