All-Party Meet On Bangladesh
ಸರ್ವಪಕ್ಷ ಸಭೆ

Bangladesh Turmoil: ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ; ಸಂಸದರೊಂದಿಗೆ ವಿದೇಶಾಂಗ ಸಚಿವ ಮಹತ್ವದ ಚರ್ಚೆ

ಹಿಂಸಾಚಾರ ಪೀಡಿತ ಬಾಂಗ್ಲಾದೇಶ ಪರಿಸ್ಥಿತಿ ಮತ್ತು ಭಾರತ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜೈಶಂಕರ್ ಎಲ್ಲಾ ಪಕ್ಷಗಳ ನಾಯಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
Published on

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ಮತ್ತು ಹಿಂಸಾಚಾರದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ಮಹತ್ವದ ಸರ್ವಪಕ್ಷ ಸಭೆ ನಡೆಸಿದೆ.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದಲ್ಲಿ ಸೇನೆ ದೇಶದ ಆಡಳಿತವನ್ನು ತನ್ನ ತೆಕ್ಕೆಗೆ ಸ್ವಾಧೀನಪಡಿಸಿಕೊಂಡಿರುವ ವಿದ್ಯಮಾನಗಳ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

ಎಲ್ಲ ಪಕ್ಷಗಳ ಸಂಸದರೊಂದಿಗೆ ಜೈ ಶಂಕರ್ ಮಹತ್ವದ ಚರ್ಚೆ ನಡೆಸಿದ್ದು, ಹಿಂಸಾಚಾರ ಪೀಡಿತ ಬಾಂಗ್ಲಾದೇಶ ಪರಿಸ್ಥಿತಿ ಮತ್ತು ಭಾರತ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜೈಶಂಕರ್ ಎಲ್ಲಾ ಪಕ್ಷಗಳ ನಾಯಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

All-Party Meet On Bangladesh
ಬಾಂಗ್ಲಾದೇಶ: ಪ್ರಧಾನಿ ಹಸೀನಾ ರಾಜೀನಾಮೆ; 'ಸುರಕ್ಷಿತ ಸ್ಥಳ'ಕ್ಕೆ ಪ್ರಯಾಣ; ದೇಶ ಸೇನೆ ವಶಕ್ಕೆ!

ಜೈಶಂಕರ್ ಅವರಲ್ಲದೆ ಈ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಸಂಪುಟದ ಪ್ರಮುಖ ಸಚಿವರು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.

ಶೇಖ್ ಹಸೀನಾ ಅವರು ನಿನ್ನೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಅವರ ಅರಮನೆಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು ಮಿಲಿಟರಿ "ಮಧ್ಯಂತರ ಸರ್ಕಾರ" ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

ಅಲ್ಲದೆ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಇನ್ನು ಬಾಂಗ್ಲಾದೇಶ ಹಿಂಸಾಚಾರದಲ್ಲಿ ಈ ವರೆಗೂ 300 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಶೇಖ್ ಹಸೀನಾರನ್ನು ಸ್ವಾಗತಿಸಿದ ಧೋವಲ್

ಇನ್ನು ಬಾಂಗ್ಲಾದೇಶ ತೊರೆದಿದ್ದ ಶೇಖ್ ಹಸೀನಾ ನಿನ್ನೆ ಸಂಜೆ ದೆಹಲಿಯಿಂದ 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ಏರ್ ಫೋರ್ಸ್ ಬೇಸ್‌ಗೆ ಬಂದಿಳಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಬರಮಾಡಿಕೊಂಡರು. ಇನ್ನು ಶೇಖ್ ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಾರೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com