ನವದೆಹಲಿ: ಮುಂಬೈ ಮೂಲದ ಆಭರಣ ವ್ಯಾಪಾರಿಯಿಂದ 20 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಸಹಾಯಕ ನಿರ್ದೇಶಕರನ್ನು ಸಿಬಿಐ ಬಂಧಿಸಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ(ಇಡಿ) ಆಗಸ್ಟ್ 3 ಮತ್ತು 4 ರಂದು ಆಭರಣ ವ್ಯಾಪಾರಿ ಮನೆ ಮತ್ತು ಅಂಗಡಿಯಲ್ಲಿ ಶೋಧ ನಡೆಸಿತ್ತು. ಇದರ ನಂತರ ಸಹಾಯಕ ನಿರ್ದೇಶಕ ಸಂದೀಪ್ ಸಿಂಗ್ ಯಾದವ್ ಅವರು ಆಭರಣ ವ್ಯಾಪಾರಿಯ ಪುತ್ರನಿಗೆ 25 ಲಕ್ಷ ರೂಪಾಯಿ ನೀಡದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.
ಮಾತುಕತೆ ವೇಳೆ ಲಂಚದ ಬೇಡಿಕೆಯನ್ನು 20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ(ಸಿಬಿಡಿಟಿ) ಅಧಿಕಾರಿಯಾಗಿರುವ ಯಾದವ್ ಅವರು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement