ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024 ಮಂಡನೆ; ಇದು ಸಂವಿಧಾನದ ಮೇಲಿನ ದಾಳಿ ಎಂದ ವಿರೋಧಪಕ್ಷ

ವಕ್ಫ್ (ತಿದ್ದುಪಡಿ) ಮಸೂದೆ, 2024 ನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಇಂದು ಮಂಡಿಸಿದರು.
ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024  ಮಂಡನೆ; ಇದು ಸಂವಿಧಾನದ ಮೇಲಿನ ದಾಳಿ ಎಂದ ವಿರೋಧಪಕ್ಷ
Updated on

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ಗುರುವಾರ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024 ನ್ನು ಮಂಡಿಸಿದ್ದು, 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.

ವಕ್ಫ್ (ತಿದ್ದುಪಡಿ) ಮಸೂದೆ, 2024 ನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಇಂದು ಮಂಡಿಸಿದರು.

ರಾಜ್ಯ ವಕ್ಫ್ ಬೋರ್ಡ್‌ಗಳ ಅಧಿಕಾರಗಳು, ವಕ್ಫ್ ಆಸ್ತಿಗಳ ನೋಂದಣಿ ಮತ್ತು ಸಮೀಕ್ಷೆ ಮತ್ತು ಅತಿಕ್ರಮಣಗಳನ್ನು ತೆಗೆದುಹಾಕುವುದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಸೂದೆಯು ಸಹಾಯವಾಗುತ್ತದೆ.

ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದರಾದ ಕೆಸಿ ವೇಣುಗೋಪಾಲ್ ಮತ್ತು ಹೈಬಿ ಈಡನ್ ಅವರು ವಕ್ಫ್ ಮಂಡಳಿಗಳ ಕಾನೂನು ತಿದ್ದುಪಡಿ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿ ನೋಟಿಸ್ ನೀಡಿದ್ದರು.

ಇದು ಕಠಿಣ ಕಾನೂನು ಮತ್ತು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ ಎಂದು ವೇಣುಗೋಪಾಲ್ ಹೇಳಿದರು.

ಬಿಜೆಪಿಯ ವಿಭಜಕ ರಾಜಕಾರಣಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ ಆದರೆ ಹರಿಯಾಣ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅದನ್ನೇ ಮುಂದುವರಿಸುತ್ತಿದ್ದಾರೆ ಎಂದರು.

ಈ ಮಸೂದೆಯು ಸಾಕಷ್ಟು ಕಾನೂನು ರಕ್ಷಣೆಗಳಿಲ್ಲದೆ ವ್ಯಕ್ತಿಗಳು ಮತ್ತು ಧಾರ್ಮಿಕ ಸಂಸ್ಥೆಗಳ ಆಸ್ತಿ ಹಕ್ಕುಗಳನ್ನು ಸಂಭಾವ್ಯವಾಗಿ ಉಲ್ಲಂಘಿಸಬಹುದು ಎಂದು ಈಡನ್ ಹೇಳಿದರು.

ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024  ಮಂಡನೆ; ಇದು ಸಂವಿಧಾನದ ಮೇಲಿನ ದಾಳಿ ಎಂದ ವಿರೋಧಪಕ್ಷ
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ: ಸಿಎಂ ಸಿದ್ದರಾಮಯ್ಯ ವಿರೋಧ

ಇದು ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳ ವಿಶಾಲ-ಆಧಾರಿತ ಸಂಯೋಜನೆಯನ್ನು ಒದಗಿಸುತ್ತದೆ ಮತ್ತು ಅಂತಹ ಸಂಸ್ಥೆಗಳಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ಖಚಿತಪಡಿಸುತ್ತದೆ. ಬೋಹರಾ ಮತ್ತು ಅಘಖಾನಿಗಳಿಗೆ ಪ್ರತ್ಯೇಕ ಔಕಾಫ್ ಮಂಡಳಿಯನ್ನು ಸ್ಥಾಪಿಸಲು ಮಸೂದೆಯು ಪ್ರಸ್ತಾಪಿಸುತ್ತದೆ.

ಕರಡು ಕಾನೂನು ಮುಸ್ಲಿಂ ಸಮುದಾಯಗಳಲ್ಲಿ ಶಿಯಾಗಳು, ಸುನ್ನಿಗಳು, ಬೋಹ್ರಾಗಳು, ಅಗಾಖಾನಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯವನ್ನು ಒದಗಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com