ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ: ಅಮಿತ್ ಶಾ

ಈ ಸಮಿತಿಯು ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ
Updated on

ನವದೆಹಲಿ: ಭಾರತ - ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಾಗರಿಕ ದಂಗೆಯ ಹಿನ್ನೆಲೆಯಲ್ಲಿ, ಇಂಡೋ-ಬಾಂಗ್ಲಾದೇಶದ ಗಡಿಯಲ್ಲಿ(ಐಬಿಬಿ) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮೋದಿ ಸರ್ಕಾರವು ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.

ಈ ಸಮಿತಿಯು ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ
ಬಾಂಗ್ಲಾದೇಶ ಬಿಕ್ಕಟ್ಟು: ಈಶಾನ್ಯದ 4 ರಾಜ್ಯಗಳ ಗಡಿಭಾಗದಲ್ಲಿ ಭದ್ರತೆ ಹೆಚ್ಚಳ; ಬಿಹಾರದಲ್ಲಿಯೂ ಕಟ್ಟೆಚ್ಚರ

ಈ ಸಮಿತಿಯು ಎಡಿಜಿ, ಗಡಿ ಭದ್ರತಾ ಪಡೆ, ಪೂರ್ವ ಕಮಾಂಡ್ ನೇತೃತ್ವದಲ್ಲಿರುತ್ತದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com