ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದ್ದು, ಮತ್ತೊಮ್ಮೆ ಹರ್ ಘರ್ ತಿರಂಗಾವನ್ನು ಸಾಮೂಹಿಕ ಅಭಿಯಾನವನ್ನಾಗಿ ಮಾಡೋಣ. ನಾನು ನನ್ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಿದ್ದೇನೆ. ನೀವೂ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸಿ ನನ್ನೊಂದಿಗೆ ಕೈಜೋಡಿಸಿ. ನಿಮ್ಮ ಸೆಲ್ಫಿಗಳನ್ನು https://hargartiranga.com ನಲ್ಲಿ ಹಂಚಿಕೊಳ್ಳಿ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಕ್ಕೂ ಮೊದಲೇ ಪ್ರಧಾನಿ ಮೋದಿ ಅವರು, ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ನ ಡಿಪಿಯನ್ನು ಬದಲಾಯಿಸಿದ್ದಾರೆ. ಇದೀಗ ಡಿಪಿಯಲ್ಲಿ ತ್ರಿವರ್ಣ ಧ್ವಜದ ಫೋಟೋವನ್ನು ಹಾಕಿದ್ದಾರೆ.
Advertisement