ಆಗಸ್ಟ್ 15 ರಿಂದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಆಂದೋಲನ

ಲಖನೌ: ನಿರುದ್ಯೋಗ, ಬೆಲೆ ಏರಿಕೆ ಮತ್ತು ಮಹಿಳೆಯರ ಮೇಲಿನ ಅಪರಾಧಗಳನ್ನು ಖಂಡಿಸಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಬೃಹತ್ ಆಂದೋಲನ ನಡೆಸಲು ನಿರ್ಧರಿಸಿದೆ.
ಬೀದಿ ನಾಟಕಗಳು, ಹಳ್ಳಿಗಳಲ್ಲಿ ರಾತ್ರಿ ಶಿಬಿರಗಳು ಮತ್ತು ಪಭತ್ ಫೆರಿಸ್ ಆಯೋಜಿಸುವ ಮೂಲಕ ರಾಜ್ಯಾದ್ಯಂತ ಬೃಹತ್ ಆಂದೋಲನ ಆಯೋಜಿಸುತ್ತಿದೆ. ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯಿಂದ ಆಂದೋಲನ ಆರಂಭಿಸಲು ಯೋಜಿಸಲಾಗಿದೆ.
ಇತ್ತೀಚೆಗಷ್ಟೇ ನಡೆದ ಹಿರಿಯ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚಿನ ಲೋಕಸಭಾ ಚುನಾವಣೆಯ ಸಮಯದಲ್ಲಿ ಗಳಿಸಿದ ಬಿಜೆಪಿ ವಿರೋಧಿ ಅಲೆಯನ್ನು ಹೇಗೆ ಉಳಿಸಿಕೊಳ್ಳುವುದು ಎಂಬುದರ ಕುರಿತು ಪ್ರತಿಕ್ರಿಯೆ ಮತ್ತು ಸಲಹೆಗಳಿಗಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರು ಸಭೆ ಕರೆದಿದ್ದರು.
ಪಕ್ಷದ ಮುಖ್ಯ ವಿಭಾಗವು ರಾತ್ರಿ ಶಿಬಿರಗಳು ಮತ್ತು “ಪ್ರಭಾತ್ ಪೇರಿ” ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ ಸಾಂಸ್ಕೃತಿಕ ವಿಭಾಗವು “ನುಕ್ಕಡ್ ಸಭೆಗಳನ್ನು” ಆಯೋಜಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಿರುದ್ಯೋಗ, ಮಹಿಳೆಯರ ಮೇಲಿನ ಅಪರಾಧ, ಬೆಲೆ ಏರಿಕೆಯಂತಹ ಸಮಸ್ಯೆಗಳು ಸಾಮಾನ್ಯ ಜನರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದು ಅಜಯ್ ರೈ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



