ಪಶ್ಚಿಮ ಬಂಗಾಳ: ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ, ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ, ಬೃಹತ್ ಪ್ರತಿಭಟನೆ

ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಶುಕ್ರವಾರ ಪತ್ತೆಯಾಗಿತ್ತು. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
Updated on

ಕೋಲ್ಕತ್ತ: ಇಲ್ಲಿನ ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿವೆ. ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಶುಕ್ರವಾರ ಪತ್ತೆಯಾಗಿತ್ತು.

ಹತ್ಯೆಯನ್ನು ಪ್ರತಿಭಟಿಸಿ ಶನಿವಾರ ಮತ್ತು ಭಾನುವಾರ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಕ್ರಮವಾಗಿ ಸಿಪಿಐ(ಎಂ) ನ ವಿದ್ಯಾರ್ಥಿಗಳ ಯುವ ಘಟಕಗಳಾದ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ತಿಳಿಸಿವೆ.

ಮೃತ ಡಾಕ್ಟರ್ ಎದೆಯ ಔಷಧ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಗುರುವಾರ ರಾತ್ರಿ ಕರ್ತವ್ಯದಲ್ಲಿದ್ದರು. ದೇಹದ ಮೇಲೆ ಗಾಯದ ಗುರುತುಗಳಿವೆ.

ಸರ್ಕಾರಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯೊಳಗೆ ಆಕೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ
ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com