ನೋಯ್ಡಾ: ಶಾಲಾ-ಕಾಲೇಜುಗಳನ್ನು ಶಿಕ್ಷಣದ ದೇವಾಲಯ ಎಂದು ಕರೆಯಲಾಗುತ್ತದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಜೀವನದ ಶಿಸ್ತನ್ನು ಕಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿದ್ಯಾರ್ಥಿಗಳು ಎಲ್ಲೆ ದಾಟಿ ನಡೆದುಕೊಳ್ಳುತ್ತಿದ್ದು ಶಾಲೆಯ ಘನತೆಗೆ ಮಸಿ ಬಳಿಯುವ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ಈ ಮಧ್ಯೆ, ಶಾಲೆಯ ಪ್ರತಿಷ್ಠೆಗೆ ಕಳಂಕ ತರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.
ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಅದು ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿದ್ದಾರೆ. ಆದರೆ ತರಗತಿಯ ಕೊನೆಯ ಬೆಂಚ್ ನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯು ಬಹಿರಂಗವಾಗಿ ಪ್ರಣಯದಲ್ಲಿ ತೊಡಗಿರುವುದು ಕಾಣಬಹುದು. ವಿದ್ಯಾರ್ಥಿನಿಯು ತನ್ನ ಪಕ್ಕದಲ್ಲಿ ಕುಳಿತ ವಿದ್ಯಾರ್ಥಿಯನ್ನು ತಬ್ಬಿಕೊಳ್ಳುತ್ತಿದ್ದು ನಂತರ ಆತನಿಗೆ ಚುಂಬಿಸಲು ಪ್ರಾರಂಭಿಸುತ್ತಾಳೆ. ಇದೇ ವೇಳೆ ಇನ್ನೊಂದು ಸಾಲಿನಲ್ಲಿ ಕುಳಿತ ವಿದ್ಯಾರ್ಥಿನಿ ಅವರ ಪ್ರಣಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಈ ವಿಡಿಯೋ ನೋಯ್ಡಾದ ಶಾಲೆಯೊಂದರದ್ದು ಎಂದು ಹೇಳಲಾಗುತ್ತಿದೆ.
ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳ ನಡುವಿನ ಪ್ರಣಯದ ವಿಡಿಯೋ ವೈರಲ್ ಆಗಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದೆ ಕೂಡ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ನೋಯ್ಡಾ ಸೆಕ್ಟರ್ -125ರಲ್ಲಿರುವ ಖಾಸಗಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ, ಹುಡುಗ ಮತ್ತು ಹುಡುಗಿ ಪರಸ್ಪರ ಚುಂಬಿಸುತ್ತಿರುವುದು ಮತ್ತು ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಿತ್ತು. ಇದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವೈರಲ್ ಮಾಡಲಾಗಿತ್ತು.
ವೀಡಿಯೊ ವೈರಲ್ ಆದ ನಂತರ, ನೋಯ್ಡಾ ಪೊಲೀಸರು ವೀಡಿಯೊದಲ್ಲಿ ಕಂಡುಬರುವ ಯುವಕ ಮತ್ತು ಯುವತಿಯನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ. ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಎಲ್ಲಿಂದ ಬಂದಿದೆ ಎಂಬ ಬಗ್ಗೆ ಪೊಲೀಸರು ಇನ್ನೂ ಯಾವುದೇ ಅಧಿಕೃತ ದೃಢೀಕರಣವನ್ನು ನೀಡಿಲ್ಲ.
Advertisement