
ಗುನಾ: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸೋಮವಾರ ಮೂರು ಚೀಲಗಳಲ್ಲಿ ತುಂಡು ತುಂಡಾಗಿ ಕತ್ತರಿಸಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖತೋಲಿ ಗ್ರಾಮದ ಪಡಿತರ ಅಂಗಡಿಯೊಂದರ ಹಿಂದೆ ಚೀಲಗಳು ಪತ್ತೆಯಾಗಿವೆ ಎಂದು ಚಂಚೋಡಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ದಿವ್ಯಾ ರಾಜವತ್ ತಿಳಿಸಿದ್ದಾರೆ.
ಸಾರ್ವಜನಿಕರು ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರ ತಂಡ ಅಲ್ಲಿಗೆ ದೌಡಾಯಿಸಿ ಚೀಲಗಳನ್ನು ತೆರೆದಾಗ, ತುಂಡರಿಸಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅದರಲ್ಲಿ ಪ್ಯಾಕ್ ಮಾಡಲಾಗಿತ್ತು.
ಚೀಲಗಳು ಪತ್ತೆಯಾಗುವ ಕೆಲವೇ ಗಂಟೆಗಳ ಮೊದಲು ಕೊಲೆ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಮತ್ತು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement