ವಕ್ಫ್ ಮಸೂದೆ: JPC ಸಮಿತಿಯ ಮುಖ್ಯಸ್ಥರಾಗಿ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ನೇಮಕ

ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಜೆಪಿಸಿಯಲ್ಲಿ ಇರಲಿದ್ದು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ.
ಜಗದಾಂಬಿಕಾ ಪಾಲ್
ಜಗದಾಂಬಿಕಾ ಪಾಲ್
Updated on

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯ (JPC) ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸಂಸದ ಜಗದಾಂಬಿಕಾ ಪಾಲ್ ಅವರನ್ನು ನೇಮಿಸಲಾಗಿದೆ.

31 ಸದಸ್ಯರ ಸಮಿತಿಯ ಮುಖ್ಯಸ್ಥರಾಗಿ ಜಗದಾಂಬಿಕಾ ಪಾಲ್ ಅವರನ್ನು ಸ್ಪೀಕರ್ ಓಂ ಬಿರ್ಲಾ ನೇಮಕ ಮಾಡಿದ್ದಾರೆ ಎಂದು ಲೋಕಸಭೆಯ ಅಧಿಸೂಚನೆ ತಿಳಿಸಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಅದರ ನಿಬಂಧನೆಗಳ ವಿರುದ್ಧ ಪ್ರತಿಭಟನೆಯ ನಡುವೆ, ಸರ್ಕಾರವು ಮಸೂದೆಯನ್ನು ಎರಡೂ ಸದನಗಳ ಜಂಟಿ ಸಮಿತಿಗೆ ಕಳುಹಿಸಲು ನಿರ್ಧರಿಸಿದೆ.

ಲೋಕಸಭೆಯಿಂದ 21 ಮತ್ತು ರಾಜ್ಯಸಭೆಯಿಂದ 10 ಸದಸ್ಯರು ಜೆಪಿಸಿಯಲ್ಲಿ ಇರಲಿದ್ದು ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ. 73 ವರ್ಷದ ಪಾಲ್ ಉತ್ತರ ಪ್ರದೇಶದಿಂದ ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಎಲ್ಲಾ ಪಕ್ಷಗಳೊಂದಿಗೆ ಜಗದಾಂಬಿಕಾ ಪಾಲ್ ಉತ್ತ ಸೌಹಾರ್ದ ಸಂಬಂಧ ಹೊಂದಿದ್ದಾರೆ. ಸಂಸದೀಯ ವ್ಯವಹಾರಗಳ ಖಾತೆಯನ್ನು ಹೊಂದಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಮಿತಿಯ ಭಾಗವಾಗಲು ಸದಸ್ಯರನ್ನು ಹೆಸರಿಸುವ ಪ್ರಸ್ತಾವನೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಕಳೆದ ಶುಕ್ರವಾರ ಅಂಗೀಕರಿಸಿತು.

ಲೋಕಸಭೆಯಲ್ಲಿ ಸಮಿತಿಯ 12 ಸದಸ್ಯರು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (NDA) ಇದ್ದಾರೆ. ಇದರಲ್ಲಿ ಬಿಜೆಪಿಯ ಎಂಟು ಮತ್ತು ವಿರೋಧ ಪಕ್ಷದ ಒಂಬತ್ತು ಸದಸ್ಯರು ಸೇರಿದ್ದಾರೆ. ಮೇಲ್ಮನೆಯಲ್ಲಿ ಬಿಜೆಪಿಯಿಂದ ನಾಲ್ವರು, ಪ್ರತಿಪಕ್ಷದಿಂದ ನಾಲ್ವರು, ಮಸೂದೆಯನ್ನು ವಿರೋಧಿಸಿದ ವೈಎಸ್‌ಆರ್‌ಸಿಪಿಯಿಂದ ಒಬ್ಬರು ಮತ್ತು ಒಬ್ಬರು ನಾಮನಿರ್ದೇಶಿತ ಸದಸ್ಯದರು ಇರಲಿದ್ದಾರೆ.

ಜಗದಾಂಬಿಕಾ ಪಾಲ್
ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ: ಸಿಎಂ ಸಿದ್ದರಾಮಯ್ಯ ವಿರೋಧ

ಕಳೆದ ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದು ತೀವ್ರ ಚರ್ಚೆಯ ನಂತರ ಅದನ್ನು ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲಾಯಿತು. ಇದರಲ್ಲಿ ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸಂವಿಧಾನದ ಮೇಲಿನ ದಾಳಿ ಎಂದು ಕರೆದಿವೆ. ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಸಮಿತಿಯು ತನ್ನ ವರದಿಯನ್ನು ಲೋಕಸಭೆಯಲ್ಲಿ ಮಂಡಿಸುವಂತೆ ತಿಳಿಸಲಾಗಿದೆ ಎಂದು ರಿಜಿಜು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com