ಕೋಲ್ಕತ್ತಾ ಸರ್ಕಾರಿ ಮೆಡಿಕಲ್ ಕಾಲೇಜು ವೈದ್ಯೆ ಹತ್ಯೆ: ರಾಷ್ಟ್ರವ್ಯಾಪಿ ಮುಷ್ಕರ, ಆರೋಗ್ಯ ಸೇವೆ ವ್ಯತ್ಯಯ

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ​​(FORDA) ಕರೆಗೆ ಪ್ರತಿಕ್ರಿಯೆಯಾಗಿ ಈ ಮುಷ್ಕರ ನಡೆಯುತ್ತಿದ್ದು, ನ್ಯಾಯ ಒದಗಿಸುವವರೆಗೆ ಹಾಗೂ ತಮ್ಮ ಬೇಡಿಕೆ ಈಡೇರಿಸದ ಹೊರತು ಮುಷ್ಕರ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ವೈದ್ಯರ ಮುಷ್ಕರ
ವೈದ್ಯರ ಮುಷ್ಕರ
Updated on

ನವದೆಹಲಿ: ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಖಂಡಿಸಿ ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರು ನಿನ್ನೆ ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಹೊರರೋಗಿ ವಿಭಾಗಗಳು ಮತ್ತು ತುರ್ತು ರಹಿತ ಶಸ್ತ್ರಚಿಕಿತ್ಸಾ ಆರೋಗ್ಯ ಸೇವೆಗಳಿಗೆ ಹೊಡೆತ ಬಿದ್ದಿದೆ.

ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ​​(FORDA) ಕರೆಗೆ ಪ್ರತಿಕ್ರಿಯೆಯಾಗಿ ಈ ಮುಷ್ಕರ ನಡೆಯುತ್ತಿದ್ದು, ನ್ಯಾಯ ಒದಗಿಸುವವರೆಗೆ ಹಾಗೂ ತಮ್ಮ ಬೇಡಿಕೆ ಈಡೇರಿಸದ ಹೊರತು ಮುಷ್ಕರ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಫೋರ್ಡಾ ಪ್ರಕಾರ, ಅನಿರ್ದಿಷ್ಟ ಮುಷ್ಕರದ ಸಮಯದಲ್ಲಿ, ಒಪಿಡಿ ಸೇವೆಗಳು, ಆಪರೇಷನ್ ಥಿಯೇಟರ್‌ಗಳು ಮತ್ತು ವಾರ್ಡ್ ಕರ್ತವ್ಯಗಳನ್ನು ಮುಚ್ಚಲಾಗುವುದು, ಆದರೆ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾದ ಏಮ್ಸ್, ಆರ್ ಎಂಎಲ್ ಆಸ್ಪತ್ರೆ ಮತ್ತು ಸಫ್ದರ್‌ಜಂಗ್ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳ ಕಿರಿಯ ವೈದ್ಯರು ಬೆಳಗ್ಗೆ ಮುಷ್ಕರವನ್ನು ಪ್ರಾರಂಭಿಸಿದರು, ಇದರಿಂದಾಗಿ ವೈದ್ಯಕೀಯ ಸೌಲಭ್ಯಗಳ ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿದ ರೋಗಿಗಳಿಗೆ ಆರೋಗ್ಯ ಸೌಲಭ್ಯ ಸಿಗದೆ ವಾಪಸ್ಸಾದರು.

ವೈದ್ಯರ ಮುಷ್ಕರ
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್‌ ರಾಯ್ ಅಶ್ಲೀಲ ಚಿತ್ರ ವ್ಯಸನಿ, ಹೆಣ್ಣುಬಾಕ!

ಪಶ್ಚಿಮ ಬಂಗಾಳದಲ್ಲಿ, ರಾಜ್ಯದಾದ್ಯಂತ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಕಿರಿಯ ವೈದ್ಯರು, ಇಂಟರ್ನ್‌ಗಳು ಮತ್ತು ಸ್ನಾತಕೋತ್ತರ ತರಬೇತಿದಾರರು ತಮ್ಮ ಮುಷ್ಕರ ಮುಂದುವರೆಸುವುದಾಗಿ ಹೇಳಿದರು, ರಾಷ್ಟ್ರೀಯ ಮಹಿಳಾ ಆಯೋಗದ ಇಬ್ಬರು ಸದಸ್ಯರ ತಂಡ ನಿನ್ನೆ ಮಧ್ಯಾಹ್ನ ಕೋಲ್ಕತ್ತಾಗೆ ಆಗಮಿಸಿದ್ದು, ನಗರ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ.

ಏನಿದು ಘಟನೆ: ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ 31 ವರ್ಷದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಲಾಗಿದೆ.

ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com