ಜಮ್ಮು-ಕಾಶ್ಮೀರ: ದೋಡಾ ಎನ್‌ಕೌಂಟರ್, ಭಾರಿ ಗುಂಡಿನ ಚಕಮಕಿ ನಡುವೆ ಉಗ್ರರಿಗಾಗಿ ಶೋಧ ಮುಂದುವರಿಕೆ

ಭಯೋತ್ಪಾದಕರು ಶಿವಗಢ-ಅಸ್ಸಾರ್ ಬೆಲ್ಟ್‌ನಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಭಾರಿ ಗುಂಡಿನ ಚಕಮಕಿಯ ನಂತರ ಶಂಕಿತ ಉಗ್ರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಯೋತ್ಪಾದಕರು ಶಿವಗಢ-ಅಸ್ಸಾರ್ ಬೆಲ್ಟ್‌ನಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಒಂದು M4 ಕಾರ್ಬೈನ್ ಮತ್ತು ಮೂರು ಬ್ಯಾಕ್ ಪ್ಯಾಕ್ ಗಳನ್ನು ಎನ್ ಕೌಂಟರ್ ಸ್ಥಳದಿಂದ ವಶಪಡಿಸಿಕೊಂಡಿವೆ.

ಭದ್ರತಾ ಪಡೆಗಳ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಈ ಪ್ರದೇಶಗಳಿಗೆ ತೆರಳಿದ್ದಾರೆ ಎನ್ನಲಾಗಿದ್ದು, ಪೊಲೀಸರು ಉಧಮ್‌ಪುರ ಜಿಲ್ಲೆಯ ಪಟ್ನಿಟಾಪ್ ಬೆಲ್ಟ್ ಬಳಿಯ ಅಕರ್ ಅರಣ್ಯದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ.

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರದ ದೋಡಾದಲ್ಲಿ ಎನ್ ಕೌಂಟರ್: ಇಬ್ಬರು ಸೈನಿಕರಿಗೆ ಗಾಯ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com