ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅರ್ಜಿ ಸಂಬಂಧ ಸಿಬಿಐಗೆ ನೋಟಿಸ್ ಮಾಡಿದೆ.
ಭ್ರಷ್ಟಾಚಾರ ಆರೋಪದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿದ್ದ ಕೇಜ್ರಿವಾಲ್, ಜಾಮೀನು ನೀಡುವಂತೆ ಮನವಿ ಮಾಡಿದರು.
ಈ ವೇಳೆ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಿದ ನ್ಯಾಯಾಲಯ, ಈಗ ಜಾಮೀನು ನೀಡಲಾಗದು' ಎಂದು ಹೇಳಿತು.
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದರು.
ಜಾರಿ ನಿರ್ದೇಶನಾಲಯದ ಪ್ರಕರಣದ ತೀರ್ಪು ಪ್ರಕಟವಾಗುವುದು ಬಾಕಿ ಇದ್ದಾಗ ಅವರನ್ನು ಸಿಬಿಐ ಬಂಧಿಸಿತ್ತು. ಅವರಲ್ಲಿ ಅರೋಗ್ಯ ಸಮಸ್ಯೆ ಇದೆ. ನಾವು ಮಧ್ಯಂತರ ಜಾಮೀನಿಗಾಗಿ ಮನವಿ ಮಾಡುತ್ತಿದ್ದೇವೆ ಎಂದು ಸಿಂಘ್ವಿ ಹೇಳಿದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೋಟಿಸ್ ನೀಡುವಂತೆ ಮನವಿ ಮಾಡಿದರು.
ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ. ಮನವಿಯ ಮೇರೆಗೆ ಸಿಬಿಐಗೆ ನೋಟಿಸ್ ಜಾರಿ ಮಾಡುತ್ತೇವಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಪ್ರತಿಕ್ರಿಯಿಸಿತು.
Advertisement