ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು.
President Droupadi Murmu
ರಾಷ್ಟ್ರಪತಿ ದ್ರೌಪದಿ ಮುರ್ಮು
Updated on

ನವದೆಹಲಿ: ಸಾಮಾಜಿಕ ಶ್ರೇಣಿಗಳ ಆಧಾರದ ಅಪಶ್ರುತಿಯನ್ನು ಹುಟ್ಟುಹಾಕುವ ಮತ್ತು ಸಾಮಾಜಿಕ ಶ್ರೇಣಿಗಳಲ್ಲಿ ಬೇರೂರಿರುವ ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಒತ್ತಿ ಹೇಳಿದ್ದಾರೆ.

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು. ಇದು ಸಾಮಾಜಿಕ ಪ್ರಜಾಪ್ರಭುತ್ವದತ್ತ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿದರು.

ದೇಶವು ಅದರ ವೈವಿಧ್ಯತೆ ಮತ್ತು ಬಹುತ್ವದ ಮೇಲೆ ಅಭಿವೃದ್ಧಿ ಹೊಂದುತ್ತದೆ. ಒಂದು ಸುಸಂಘಟಿತ ಘಟಕವಾಗಿ ಮುಂದುವರಿಯುತ್ತದೆ, "ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣಕ್ಕಾಗಿ ಅಭೂತಪೂರ್ವ ಕ್ರಮಗಳನ್ನು ಆರಂಭಿಸಿದ ನರೇಂದ್ರ ಮೋದಿ ಸರ್ಕಾರಕ್ಕೆ ಸಾಮಾಜಿಕ ನ್ಯಾಯವು ಪ್ರಮುಖ ಆದ್ಯತೆಯಾಗಿದೆ" ಎಂದು ಹೇಳಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮಾತನ್ನು ಉಲ್ಲೇಖಿಸಿದ ರಾಷ್ಟ್ರಪತಿಗಳು, "ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ". ರಾಜಕೀಯ ಪ್ರಜಾಪ್ರಭುತ್ವದ ಸ್ಥಿರವಾದ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ಧನೆಯತ್ತ ಸಾಧಿಸಿದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇಂದು, ಆಗಸ್ಟ್ 14, ನಮ್ಮ ದೇಶವು ವಿಭಜನೆಯ ಭಯಾನಕ ಸ್ಮರಣೆಯ ದಿನವನ್ನು ಆಚರಿಸುತ್ತಿದೆ. ವಿಭಜನೆಯ ಭೀಕರತೆಯನ್ನು ನೆನಪಿಸಿಕೊಳ್ಳುವ ದಿನವಿದು. ನಮ್ಮ ಮಹಾನ್ ರಾಷ್ಟ್ರವು ವಿಭಜನೆಯಾದಾಗ, ಲಕ್ಷಾಂತರ ಜನರು ಪಲಾಯನ ಮಾಡಲು ಒತ್ತಾಯಿಸಲ್ಪಟ್ಟರು ಮತ್ತು ಲೆಕ್ಕವಿಲ್ಲದಷ್ಟು ಜನರು ಜೀವಗಳನ್ನು ಕಳೆದುಕೊಂಡರು. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ನಾವು ಈ ಅಭೂತಪೂರ್ವ ಮಾನವೀಯ ದುರಂತವನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಛಿದ್ರಗೊಂಡ ಕುಟುಂಬಗಳೊಂದಿಗೆ ಬೆಂಬಲವಾಗಿ ನಿಂತಿದ್ದೇವೆ. ಸಾಮಾಜಿಕ ಶ್ರೇಣಿಗಳ ಆಧಾರದ ಮೇಲೆ ಅಪಶ್ರುತಿಯನ್ನು ಹುಟ್ಟುಹಾಕುವ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.

President Droupadi Murmu
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್, ಅಶೋಕ್ ಹಾಲ್ ಗೆ ಮರುನಾಮಕರಣ

ಭಾರತವು 2021 ಮತ್ತು 2024 ರ ನಡುವೆ ಸರಾಸರಿ ಶೇ. 8 ರಷ್ಟು ವಾರ್ಷಿಕ ಬೆಳವಣಿಗೆಯೊಂದಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದು ಜನರ ಕೈಗೆ ಹೆಚ್ಚಿನ ಹಣವನ್ನು ನೀಡಿದ್ದು ಮಾತ್ರವಲ್ಲ, ಬಡತನ ರೇಖೆಗಿಂತ ಕೆಳಗಿರುವ ಜನರ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದೆ ಎಂದರು.

ಇದೇ ವೇಳೆ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಶ್ಲಾಘಿಸಿದ್ದ ಮುರ್ಮ, ಹೊಸ ಕ್ರಿಮಿನಲ್ ಕಾನೂನುಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂದ ಗೌರವ ಎಂದು ಕರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com