ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಪ್ರತಿಭಟನೆ ವೇಳೆ ಆರ್ ಜಿ ಕಾರ್ ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ

ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ “ ವುಮೆನ್ ರಿಕ್ಲೈಮ್ ದಿ ನೈಟ್” ಪ್ರತಿಭಟನಾ ಚಳವಳಿಯ ನಡುವೆ ಈ ಘಟನೆ ಸಂಭವಿಸಿದೆ.
ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಪ್ರತಿಭಟನೆ ವೇಳೆ ಆರ್ ಜಿ ಕಾರ್ ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ
Updated on

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಗುರುವಾರ ಮಧ್ಯರಾತ್ರಿ ನಂತರ 40ರಿಂದ 50 ಅಪರಿಚಿತ ದುಷ್ಕರ್ಮಿಗಳ ಗುಂಪು ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಪ್ರವೇಶಿಸಿ ಕೈಗೆ ಸಿಕ್ಕ ವಸ್ತುಗಳನ್ನೆಲ್ಲಾ ಧ್ವಂಸಗೊಳಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ “ ವುಮೆನ್ ರಿಕ್ಲೈಮ್ ದಿ ನೈಟ್” ಪ್ರತಿಭಟನಾ ಚಳವಳಿಯ ನಡುವೆ ಈ ಘಟನೆ ಸಂಭವಿಸಿದೆ.

ಕಳೆದ ಶುಕ್ರವಾರ 31 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ನಂತರ ಆಸ್ಪತ್ರೆಯಲ್ಲಿ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಇದರ ಹೊರತಾಗಿಯೂ, ಇಂದು ವಿಧ್ವಂಸಕ ಕೃತ್ಯಗಳು ಹೇಗೆ ನಡೆಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಅಪರಿಚಿತ ದುಷ್ಕರ್ಮಿಗಳು ಆಸ್ಪತ್ರೆ ಆವರಣವನ್ನು ಭೇದಿಸಿ, ಬ್ಯಾರಿಕೇಡ್‌ಗಳನ್ನು ನುಗ್ಗಿ ಬರಲು ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆ ಉದ್ಭವವಾಗಿದೆ. ಪೊಲೀಸ್ ಸಿಬ್ಬಂದಿ ಆವರಣದಲ್ಲಿದ್ದರೂ ವಿಧ್ವಂಸಕ ಕೃತ್ಯ ನಡೆದಿದೆ ಎಂದು ಪ್ರತಿಭಟನಾನಿರತ ವೈದ್ಯರೊಬ್ಬರು ಪಿಟಿಐಗೆ ತಿಳಿಸಿದರು.

ಗೂಂಡಾಗಳು ಕ್ಯಾಂಪಸ್‌ಗೆ ನುಗ್ಗಿ ಧರಣಿ ನಿರತ ವೈದ್ಯರಿಗೆ ಥಳಿಸಿದ್ದಾರೆ. ಇದು ನಮ್ಮ ನೈತಿಕ ಸ್ಥೈರ್ಯವನ್ನು ಮುರಿಯುವ ಪ್ರಯತ್ನವಾಗಿದೆ, ಆದ್ದರಿಂದ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುತ್ತೇವೆ. ಆದರೆ ಇಂತಹ ಘಟನೆಗಳು ಕೊನೆಯವರೆಗೂ ಹೋರಾಡುವ ನಮ್ಮ ಸಂಕಲ್ಪವನ್ನು ಬಲಪಡಿಸಿದೆ ಎಂದು ಹೇಳಿದರು.

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಪ್ರತಿಭಟನೆ ವೇಳೆ ಆರ್ ಜಿ ಕಾರ್ ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ
78ನೇ ಸ್ವಾತಂತ್ರ್ಯ ದಿನಾಚರಣೆ: ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ಕೋಲ್ಕತ್ತಾ ನಗರದಲ್ಲಿ 'ರಿಕ್ಲೈಮ್ ದಿ ನೈಟ್' ಮೂಲಕ ಪ್ರತಿಭಟನೆ!

ಸುಮಾರು 40 ಜನರ ಗುಂಪು ಪ್ರತಿಭಟನಾಕಾರರಂತೆ ವೇಷ ಧರಿಸಿ ಆಸ್ಪತ್ರೆಯ ಆವರಣಕ್ಕೆ ನುಗ್ಗಿ, ಆಸ್ತಿಯನ್ನು ಧ್ವಂಸಗೊಳಿಸಿತು. ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿತು, ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗ ಮಾಡಬೇಕಾಯಿತು. ಘಟನೆಯಲ್ಲಿ ಪೊಲೀಸ್ ವಾಹನ ಮತ್ತು ಸ್ಥಳದಲ್ಲಿದ್ದ ಕೆಲವು ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯ ಪೊಲೀಸ್ ಹೊರಠಾಣೆ ಮೇಲೆಯೂ ದಾಳಿ ನಡೆದಿದೆ.

ದೊಣ್ಣೆಗಳು, ಇಟ್ಟಿಗೆಗಳು ಮತ್ತು ರಾಡ್‌ಗಳನ್ನು ಹೊತ್ತ ದುಷ್ಕರ್ಮಿಗಳು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಅದರ ಶುಶ್ರೂಷ ಕೇಂದ್ರ ಮತ್ತು ಔಷಧಿ ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ, ಜೊತೆಗೆ ಉತ್ತರ ಕೋಲ್ಕತ್ತಾದ ಆಸ್ಪತ್ರೆಯಲ್ಲಿನ ಹೊರ ರೋಗಿಗಳ ವಿಭಾಗದ (OPD) ವಿಭಾಗವನ್ನು ಧ್ವಂಸಗೊಳಿಸಿದ್ದಾರೆ. ಸುತ್ತಮುತ್ತಲಿನ ಹಲವಾರು ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಗೋಯಲ್ ಅವರೊಂದಿಗೆ ಮಾತನಾಡಿದ್ದು, ಹಿಂಸಾಚಾರಕ್ಕೆ ಕಾರಣರಾದವರನ್ನು ಗುರುತಿಸಿ, ಹೊಣೆಗಾರರನ್ನಾಗಿ ಮಾಡುವಂತೆ ಮತ್ತು ಮುಂದಿನ 24 ಗಂಟೆಗಳಲ್ಲಿ ಅವರ ರಾಜಕೀಯ ಸಂಬಂಧವನ್ನು ಲೆಕ್ಕಿಸದೆ ಕಾನೂನನ್ನು ಎದುರಿಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com