ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶ: ಅಮೇಥಿಯಲ್ಲಿ 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.
Published on

ಅಮೇಥಿ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. ಘಟನೆ ನಡೆದು ಎರಡು ದಿನಗಳ ನಂತರ ತನ್ನ ತಾಯಿ ನಿಧನರಾದ ಕಾರಣ ಪೊಲೀಸರಿಗೆ ದೂರು ನೀಡಲು ವಿಳಂಬವಾಯಿತು ಎಂದು ಬಾಲಕಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆಗಸ್ಟ್ 8 ರಂದು ಅತ್ಯಾಚಾರ ನಡೆದಾಗ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬುಧವಾರ ಸಂಜೆ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಸರ್ಕಲ್ ಆಫೀಸರ್ ಅತುಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
78ನೇ ಸ್ವಾತಂತ್ರ್ಯ ದಿನಾಚರಣೆ: ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ಕೋಲ್ಕತ್ತಾ ನಗರದಲ್ಲಿ 'ರಿಕ್ಲೈಮ್ ದಿ ನೈಟ್' ಮೂಲಕ ಪ್ರತಿಭಟನೆ!

ದೂರಿನ ಆಧಾರದ ಮೇಲೆ ತಂದೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಂಗ್ ಹೇಳಿದ್ದಾರೆ.

ದೆಹಲಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಿದ್ದ ಬಾಲಕಿಯ ತಾಯಿ ಆಗಸ್ಟ್ 10 ರಂದು ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

X

Advertisement

X
Kannada Prabha
www.kannadaprabha.com