ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: 'ಸದೈವ ಅಟಲ್'ನಲ್ಲಿ ಶ್ರದ್ಧಾಂಜಲಿ; ರಾಷ್ಟ್ರಪತಿ, ಪ್ರಧಾನಿ ಸೇರಿ ಹಲವರು ಭಾಗಿ

ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ ತಮ್ಮ ತಂದೆಯ ಪುಣ್ಯತಿಥಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಲು 'ಸದೈವ್ ಅಟಲ್'ಗೆ ಆಗಮಿಸಿದರು. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಕೂಡ 'ಸದೈವ್ ಅಟಲ್' ಸ್ಮಾರಕದಲ್ಲಿ ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ರಾಷ್ಟ್ರಪತಿ, ಪ್ರಧಾನಿ ನಮನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ರಾಷ್ಟ್ರಪತಿ, ಪ್ರಧಾನಿ ನಮನ
Updated on

ನವದೆಹಲಿ: ಇಂದು ಆಗಸ್ಚ್ 16, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ. ಈ ಸಂದರ್ಭದಲ್ಲಿ ದೆಹಲಿಯ 'ಸದೈವ ಅಟಲ್' ಗೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆಪಿ ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಸಂಪುಟದ ಇತರ ಸದಸ್ಯರು 'ಸದೈವ್ ಅಟಲ್'ನಲ್ಲಿ ಇಂದು ಬೆಳಗ್ಗೆ ನೆರವೇರಿದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು.

ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ ತಮ್ಮ ತಂದೆಯ ಪುಣ್ಯತಿಥಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಲು 'ಸದೈವ್ ಅಟಲ್'ಗೆ ಆಗಮಿಸಿದರು. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಕೂಡ 'ಸದೈವ್ ಅಟಲ್' ಸ್ಮಾರಕದಲ್ಲಿ ಉಪಸ್ಥಿತರಿದ್ದರು.

"ನಮ್ಮ ಸ್ಫೂರ್ತಿಯ ಮೂಲವಾದ ಮಾಜಿ ಪ್ರಧಾನಿ, ಭಾರತರತ್ನ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯತಿಥಿಯಂದು ನಮನಗಳು" ಎಂದು ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಪ್ರಧಾನಿಯಾಗಿ ವಾಜಪೇಯಿಯವರು ದೇಶವನ್ನು ಆಯಕಟ್ಟಿನ ಮತ್ತು ಆರ್ಥಿಕವಾಗಿ ಬಲಪಡಿಸಿದರು ಎಂದು ಸ್ಮರಿಸಿಕೊಂಡಿದ್ದಾರೆ.

"ದೇಶದಲ್ಲಿ ರಾಜಕೀಯ ಶುದ್ಧತೆ, ರಾಷ್ಟ್ರೀಯ ಹಿತಾಸಕ್ತಿ ನಿಷ್ಠೆ ಮತ್ತು ತತ್ವಗಳ ಬಗ್ಗೆ ದೃಢತೆಯ ಬಗ್ಗೆ ಮಾತನಾಡುವಾಗಲೆಲ್ಲಾ ಅಟಲ್ ಅವರು ನೆನಪಾಗುತ್ತಾರೆ. ಒಂದೆಡೆ, ಬಿಜೆಪಿ ಸ್ಥಾಪನೆಯ ಮೂಲಕ, ಅವರು ಪ್ರಧಾನಿಯಾಗಿದ್ದಾಗ ರಾಷ್ಟ್ರೀಯ ಹಿತಾಸಕ್ತಿಯ ಸಿದ್ಧಾಂತವನ್ನು ಜನಪ್ರಿಯಗೊಳಿಸಿದರು. ದೇಶವನ್ನು ವ್ಯೂಹಾತ್ಮಕವಾಗಿ ಮತ್ತು ಆರ್ಥಿಕವಾಗಿ ಬಲಪಡಿಸಿದ್ದಾರೆ, ಅವರ ಪುಣ್ಯತಿಥಿಯಂದು ನಾನು ಗೌರವಾನ್ವಿತ ಗೌರವ ನಮನಗಳು ಎಂದು ಬರೆದುಕೊಂಡಿದ್ದಾರೆ.

1924 ರಲ್ಲಿ ಗ್ವಾಲಿಯರ್‌ನಲ್ಲಿ ಜನಿಸಿದ ವಾಜಪೇಯಿಯವರು ದಶಕಗಳ ಕಾಲ ಬಿಜೆಪಿಯ ಮುಖವಾಣಿಯಂತಿದ್ದರು. ಪೂರ್ಣಾವಧಿಯ ಅಧಿಕಾರವನ್ನು ಪೂರೈಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾಗಿದ್ದರು.

ವಾಜಪೇಯಿ ಅವರು ಮೇ 16, 1996 ರಿಂದ ಜೂನ್ 1, 1996 ರವರೆಗೆ ಮತ್ತು ಮತ್ತೆ 19 ಮಾರ್ಚ್ 1998 ರಿಂದ 22 ಮೇ 2004 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅವರು 1977 ರಿಂದ 1979ರವರೆಗೆ ಪ್ರಧಾನಿ ಮೊರಾಜಿ ದೇಸಾಯಿ ಅವರ ಸಂಪುಟದಲ್ಲಿ ಭಾರತದ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಆಗಸ್ಟ್ 16, 2018 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com