ಮುಂಬೈ: ಮಹಾ ವಿಕಾಸ್ ಅಘಾಡಿ(MVA)ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್‌ಸಿಪಿ(ಎಸ್‌ಪಿ) ಯಾವುದೇ ವ್ಯಕ್ತಿಯನ್ನು ಘೋಷಿಸಿದರೂ ಬೆಂಬಲಿಸುವುದಾಗಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿರೋಧ ಪಕ್ಷಗಳ ಮೈತ್ರಿಕೂಟ ಎಂವಿಎ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ವಿಧಾನಸಭೆ ಚುನಾವಣೆಯು ಮಹಾರಾಷ್ಟ್ರದ ಸ್ವಾಭಿಮಾನವನ್ನು ಕಾಪಾಡುವ ಹೋರಾಟವಾಗಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದರು.
MVA ಸೇನಾ(UBT), ಶರದ್ ಪವಾರ್ ನೇತೃತ್ವದ NCP(SP) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿದೆ.
ಕಾಂಗ್ರೆಸ್ ಮತ್ತು ಎನ್‌ಸಿಪಿ(ಎಸ್‌ಪಿ) ಎಂವಿಎಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಯಾರನ್ನು ಘೋಷಿಸಿದರೂ ಬೆಂಬಲಿಸುತ್ತೇನೆ.
"ನಾನು ನನಗಾಗಿ ಹೋರಾಡುತ್ತಿಲ್ಲ. ಮಹಾರಾಷ್ಟ್ರದ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇನೆ" ಎಂದು ಠಾಕ್ರೆ ಹೇಳಿದರು.
ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸುವ ಪಕ್ಷದ ತರ್ಕಕ್ಕಿಂತ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಬೇಕು ಎಂದು ಠಾಕ್ರೆ ಒತ್ತಾಯಿಸಿದರು.
ಮಹಾರಾಷ್ಟ್ರದ ಹೆಮ್ಮೆ ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ವಯಂ ಹಿತಾಸಕ್ತಿಯಿಂದ ಹೋರಾಡುವಂತೆ MVA ಕಾರ್ಯಕರ್ತರನ್ನು ಠಾಕ್ರೆ ಕೇಳಿಕೊಂಡರು.
Advertisement