ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಭೀಕರ ಅಪಘಾತ: 10 ಮಂದಿ ಸಾವು, 20ಕ್ಕೂ ಅಧಿಕ ಮಂದಿ ಗಾಯ

ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ.
ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಭೀಕರ ಅಪಘಾತ: 10 ಮಂದಿ ಸಾವು, 20ಕ್ಕೂ ಅಧಿಕ ಮಂದಿ ಗಾಯ
Updated on

ಬುಲಂದ್‌ಶಹರ್ (ಉತ್ತರ ಪ್ರದೇಶ): ಇಂದು ಭಾನುವಾರ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಸ್ ಮತ್ತು ಟೆಂಪೋ ಡಿಕ್ಕಿ ಹೊಡೆದು ಹತ್ತು ಜನರು ಮೃತಪಟ್ಟು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ.

ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗವೂ ಜಖಂಗೊಂಡಿದೆ.ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ತಡೆ ನಡೆಸಿದರು.

ಅಪಘಾತಕ್ಕೆ ಕಾರಣ ಪೊಲೀಸರಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ತನಿಖೆ ಪ್ರಾರಂಭಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com