
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ನಡುವೆ ಭಾನುವಾರ ದೆಹಲಿಗೆ ತೆರಳಿದ್ದಾರೆ. ಅವರು ಕೋಲ್ಕತ್ತಾದಿಂದ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ ಎಂದು ಸೊರೆನ್ ಅವರ ಆಪ್ತರು ಹೇಳಿದ್ದಾರೆ.
ದೆಹಲಿಗೆ ಬಂದಿಳಿದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸೋರೆನ್ , ಯಾವುದೇ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿಲ್ಲ. ವೈಯಕ್ತಿಕ ಭೇಟಿಗಾಗಿ ನವದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುನ್ನ ಸೊರೇನ್ ಬಿಜೆಪಿ ಸೇರಬಹುದು ಎಂದು ಕೆಲವು ಮಾಧ್ಯಮ ವರದಿಗಳು ಶುಕ್ರವಾರ ಹೇಳಿದ್ದವು. ಆದರೆ, ಅಂತಹ ವದಂತಿಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಸೊರೆನ್ ಶನಿವಾರ ಹೇಳಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31 ರಂದು ಇಡಿಯಿಂದ ಬಂಧಿತರಾಗಿದ್ದರು. ಅದಕ್ಕೂ ಮುನ್ನಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಚಂಪ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಲಾಗಿತ್ತು. ಫೆ. 2 ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರ ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿದ್ದರು. ಇದರಿಂದಾಗಿ ಚಂಪೈ ಸೊರೇನ್ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Advertisement