
ಕೋಲ್ಕತಾ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಕೋಲ್ಕತಾ ಹತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಗುರುತು ಲೀಕ್ ಮಾಡಿದ ಆರೋಪದ ಮೇರೆಗೆ ಬಿಜೆಪಿ ಮಾಜಿ ಸಂಸದ ಲಾಕೆಟ್ ಚಟರ್ಜಿ ಮತ್ತು ಇಬ್ಬರು ಖ್ಯಾತ ವೈದ್ಯರಿಗೆ ತನಿಖಾಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.
ಸಂತ್ರಸ್ಥೆಯ ಫೋಟೋ ಮತ್ತು ಇತರೆ ಮಾಹಿತಿಗಳನ್ನು ಲೀಕ್ ಮಾಡಿದ್ದಕ್ಕಾಗಿ ಮತ್ತು ವದಂತಿ ಹಬ್ಬಿಸಿದ ಆರೋಪದ ಮೇರೆಗೆ ಕೋಲ್ಕತ್ತಾ ಪೊಲೀಸರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಲಾಕೆಟ್ ಚಟರ್ಜಿ ಮತ್ತು ಇಬ್ಬರು ಖ್ಯಾತ ವೈದ್ಯರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಗುರುತನ್ನು ಇವರು ಬಹಿರಂಗಪಡಿಸಿದ್ದಾರೆ. ಈ ಮೂವರನ್ನು ಹೊರತುಪಡಿಸಿ, ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಿದ 57 ಮಂದಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ 3 ಗಂಟೆಗೆ ಲಾಲ್‌ಬಜಾರ್‌ನಲ್ಲಿರುವ ಕೋಲ್ಕತ್ತಾ ಪೊಲೀಸ್ ಪ್ರಧಾನ ಕಚೇರಿಯ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಡಾ ಕುನಾಲ್ ಸರ್ಕಾರ್ ಮತ್ತು ಡಾ ಸುವರ್ಣ ಗೋಸ್ವಾಮಿಗೆ ಸಮನ್ಸ್ ನೀಡಲಾಗಿದೆ. ಇವರು ಸಂತ್ರಸ್ಥೆಯ ಗುರುತನ್ನು ಬಹಿರಂಗಪಡಿಸಿದ್ದಾರೆ, ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಅವರು ಹೇಳಿದರು.
Advertisement