ಐಎಎಸ್ ಖಾಸಗೀಕರಣ ಮೋದಿ ಗ್ಯಾರಂಟಿ: ‘ಲ್ಯಾಟರಲ್ ಎಂಟ್ರಿ’ ನೇಮಕಾತಿ ವಿರುದ್ಧ ರಾಹುಲ್ ವಾಗ್ದಾಳಿ

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ
opposition leader Rahul Gandhi
ವಿಪಕ್ಷ ನಾಯಕ ರಾಹುಲ್ ಗಾಂಧಿonline desk
Updated on

ನವದೆಹಲಿ: ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, " ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ವಿವಿಧ ಕೇಂದ್ರ ಸಚಿವಾಲಯಗಳಲ್ಲಿನ ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳಂತಹ ಪ್ರಮುಖ ಹುದ್ದೆಗಳಿಗೆ 45 ತಜ್ಞರನ್ನು ಶೀಘ್ರದಲ್ಲೇ ನೇಮಿಸುವ ವಿಚಾರ ಬಹಿರಂಗವಾದ ನಂತರ ಕೇಂದ್ರದ ಕ್ರಮವನ್ನು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

opposition leader Rahul Gandhi
ಸ್ವಾತಂತ್ರ್ಯವೇ ನಮ್ಮ ಅತಿ ದೊಡ್ಡ ರಕ್ಷಣಾ ಕವಚ: ರಾಹುಲ್ ಗಾಂಧಿ

ಸಾಮಾನ್ಯವಾಗಿ, ಅಂತಹ ಪೋಸ್ಟ್‌ಗಳನ್ನು ಭಾರತೀಯ ಆಡಳಿತ ಸೇವೆ(ಐಎಎಸ್), ಭಾರತೀಯ ಪೊಲೀಸ್ ಸೇವೆ(ಐಪಿಎಸ್), ಭಾರತೀಯ ಅರಣ್ಯ ಸೇವೆ(ಐಎಫ್‌ಒಎಸ್‌)ಯಂತಹ ಅಖಿಲ ಭಾರತ ಸೇವೆಗಳ ಅಧಿಕಾರಿಗಳಿಂದ ತುಂಬಲಾಗುತ್ತದೆ.

"ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿನ ಪ್ರಮುಖ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ನೇಮಕಾತಿ ಮಾಡುವ ಮೂಲಕ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉನ್ನತ ಅಧಿಕಾರಶಾಹಿ ಸೇರಿದಂತೆ ದೇಶದ ಎಲ್ಲ ಉನ್ನತ ಹುದ್ದೆಗಳಲ್ಲಿ ಅವಕಾಶ ವಂಚಿತರಿಗೆ ಪ್ರಾತಿನಿಧ್ಯವಿಲ್ಲ ಎಂದು ನಾನು ಯಾವಾಗಲೂ ಹೇಳುತ್ತಲೇ ಬಂದಿದ್ದೇನೆ. ಅದನ್ನು ಸುಧಾರಿಸುವ ಬದಲು ಲ್ಯಾಟರಲ್ ಎಂಟ್ರಿ ಮೂಲಕ ಅವರನ್ನು ಉನ್ನತ ಹುದ್ದೆಗಳಿಂದ ಮತ್ತಷ್ಟು ದೂರ ತಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com