
ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಾನಸಿಕ ಪರೀಕ್ಷೆಯನ್ನು ಆರಂಭಿಸಿದೆ.
ಸಿಬಿಐನ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ(CFSL) ಐದು ತಜ್ಞರ ಮೇಲ್ವಿಚಾರಣೆಯಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ಸಂಜಯ್ ರಾಯ್ ನನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಚಾರಣೆ ವೇಳೆ ರಾಯ್ ಹೇಳಿಕೆಗಳು ಬದಲಾಗಿದ್ದು, ಪಾಲಿಗ್ರಾಫ್ ಪರೀಕ್ಷೆ ಅಗತ್ಯ ಇದೆ ಎಂದು ಸಿಬಿಐ ಮೂಲಗಳು ಸೂಚಿಸಿವೆ. ಆರು ದಿನಗಳ ತನಿಖೆಯಲ್ಲಿ ಸಂಜಯ್ ರಾಯ್ ಹೊರತುಪಡಿಸಿ ಯಾವುದೇ ಆರೋಪಿಗಳು ಭಾಗಿಯಾಗಿರುವುದು ಸಿಬಿಐಗೆ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಯ್ ಕೋಲ್ಕತ್ತಾ ಪೊಲೀಸರ ಮುಂದೆ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ, ಸಂಜಯ್ ರಾಯ್ ಹೇಳಿಕೆ ಬಗ್ಗೆ ಸಿಬಿಐ ಅನುಮಾನ ವ್ಯಕ್ತಪಡಿಸಿದ್ದು, ಸತ್ಯ ಮತ್ತು ಅವರ ಮಾನಸಿಕ ಸ್ಥಿತಿಯನ್ನು ತಿಳಿಯಲು ಮನೋವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ಭಾನುವಾರ ಸೈಕೋಮೆಟ್ರಿಕ್ ಪರೀಕ್ಷೆ ನಡೆಸಲಾಗಿತ್ತು.
Advertisement