ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರದ ಕೊನೆಯಲ್ಲಿ ಪೋಲೆಂಡ್ ಮತ್ತು ಉಕ್ರೇನ್‌ಗೆ ತಮ್ಮ ಚೊಚ್ಚಲ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಆಗಸ್ಟ್ 21-22 ರಂದು ಪೋಲೆಂಡ್ ಭೇಟಿ ನೀಡಿದ್ದು, ನಂತರ ಉಕ್ರೇನಿಯನ್ ರಾಷ್ಟ್ರೀಯ ದಿನವಾದ ಆಗಸ್ಟ್ 23 ರಂದು ಉಕ್ರೇನ್‌ನಲ್ಲಿರುತ್ತಾರೆ. "ಇದರೊಂದಿಗೆ ಮೋದಿ ಉಕ್ರೇನ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 21 ಮತ್ತು 22ರಂದು ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. ಅದಾದ ನಂತರ ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರದ ಮೇಲೆ ಕೇಂದ್ರೀಕರಿಸುತ್ತದೆ. ಉಭಯ ನಾಯಕರ ನಡುವೆ ಹಲವಾರು ದಾಖಲೆಗಳಿಗೆ ಸಹಿ ಹಾಕಲಾಗುವುದು" ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ರಷ್ಯಾದೊಂದಿಗಿನ ಸಂಘರ್ಷದ ನಂತರ ಮತ್ತು ಪ್ರಧಾನಿ ಮೋದಿ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಒಂದು ತಿಂಗಳ ನಂತರ ಇದೀಗ ಯುದ್ಧ ಪೀಡಿತ ದೇಶವಾದ ಉಕ್ರೇನ್‌ಗೆ ಮೋದಿ ಮೊದಲ ಬಾರಿಗೆ ಪ್ರವಾಸ ಮಾಡಲಿದ್ದಾರೆ.
Advertisement